ಪಾಟ್ನಾ: ಉತ್ತರ ಪ್ರದೇಶ ವಿಧಾನ ಸಭೆ ಚುನಾವಣೆ ಮುಗಿಯುವವರಗೊ ಅಯೋಧ್ಯಯಲ್ಲಿ ರಾಮ ಮಂದಿರ ನಿರ್ಮಾಣ ಮಾಡುವ ಸಂಬಂಧ ಯಾವುದೇ ಪ್ರತಿಭಟನೆ ನಡೆಸುವುದಿಲ್ಲ ಎಂದು ವಿಶ್ವ ಹಿಂದೂ ಪರಿಷತ್ ಮುಖಂಡ ಪ್ರವೀಣ್ ತೊಗಾಡಿಯಾ ಹೇಳಿದ್ದಾರೆ.
ಪಾಟ್ನಾದಲ್ಲಿ ಮಾತನಾಡಿದ ತೊಗಾಡಿಯಾ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡುವ ಉದ್ದೇಶಕ್ಕೆ ವಿಎಚ್ ಪಿ ಬದ್ಧವಾಗಿದೆ, ಅದರಿಂದ ಹಿಂದೆ ಸರಿಯುವ ಪ್ರಶ್ನೆ ಇಲ್ಲ, ಆದರೆ ವಿಧಾನ ಸಭೆ ಚುನಾವಣೆ ಮುಗಿಯುವವರೆಗೂ ಈ ಸಂಬಂಧ ಯಾವುದೇ ಚಳುವಳಿ ನಡೆಯುವುದಿಲ್ಲ ಎಂದು ಅವರು ಹೇಳಿದ್ದಾರೆ.
ಇನ್ನೂ ಬಿಹಾರದಲ್ಲಿ ಸಾರಾಯಿ ನಿಷೇಧ ಮಾಡಿರುವುದು ಸರ್ಕಾರದ ಉತ್ತಮ ನಿರ್ಧಾರ ಎಂದು ಹೇಳಿದ್ದಾರೆ.