ನವದೆಹಲಿ: ತಮಿಳುನಾಡಿಗೆ ರಾತ್ರೋರಾತ್ರಿ ನೀರು ಹರಿಸಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಮೈಸೂರು ಮಾಜಿ ಸಂಸದ ಹೆಚ್ ವಿಶ್ವನಾಥ್, ಕೂಡಲೇ ರಾಜೀನಾಮೆ ನೀಡುವಂತೆ ಆಗ್ರಹಿಸಿ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.
ಕಾವೇರಿ ನೀರನ್ನು ತಮಿಳುನಾಡುಗೆ ಬಿಡುವುದಿಲ್ಲ ಎಂದು ಘೋಷಣೆ ಮಾಡಿ, ಇಲ್ಲವೇ ಕೂಡಲೇ ಮರ್ಯಾದೆಯಿಂದ ರಾಜೀನಾಮೆ ನೀಡಿ ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಬರೆದಿರುವ ಪತ್ರದಲ್ಲಿ ಮಾಜಿ ಸಂಸದ ಹೆಚ್ ವಿಶ್ವನಾಥ್ ಆಗ್ರಹಿಸಿದ್ದಾರೆ.
ಇನ್ನು ಜಲಸಂಪನ್ಮೂಲ ಸಚಿವ ಎಂಬಿ ಪಾಟೀಲ್ ಅವರ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಸಂಸದ ವಿಶ್ವನಾಥ್, ರಾಜ್ಯದಲ್ಲಿ ನೀರಿನ ಅಭಾವವಿದ್ದರೂ ತಮಿಳುನಾಡಿಗೆ ನೀರು ಬಿಡಲಾಗಿದೆ. ಜಲಸಂಪನ್ಮೂಲ ಸಚಿವರೂ ಸಹ ರಾಜೀನಾಮೆ ನೀಡಲಿ, ಇಲ್ಲವೇ ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುವುದಿಲ್ಲ ಎಂದು ಘೋಷಿಸಲಿ ಎಂದು ವಿಶ್ವನಾಥ್ ಪತ್ರದ ಮೂಲಕ ಒತ್ತಾಯಿಸಿದ್ದಾರೆ.