ದೇಶ

ಕೇರಳದ ಬಿಜೆಪಿ ಕಚೇರಿ ಬಳಿ ಕಚ್ಚಾ ಬಾಂಬ್ ಸ್ಫೋಟ: ಸಿಪಿಐ ಮೇಲೆ ಶಂಕೆ ವ್ಯಕ್ತಪಡಿಸಿದ ಬಿಜೆಪಿ

Srinivas Rao BV

ತಿರುವನಂತಪುರಂ: ಕೇರಳದ ತಿರುವನಂತಪುರಂನಲ್ಲಿರುವ ಬಿಜೆಪಿ ಕಚೇರಿಯ ಬಳಿ ಕಚ್ಚಾ ಬಾಂಬ್ ಸ್ಫೋಟಗೊಂಡಿದೆ. ಅದೃಷ್ಟವಶಾತ್ ಕಚೇರಿಯಲ್ಲಿರುವವರಿಗೆ ಯಾವುದೇ ಹಾನಿಯಾಗಿಲ್ಲ.

ಬಾಂಬ್ ಸ್ಫೋಟದ ತೀವ್ರತೆಗೆ ಕಚೇರಿಯ ಪ್ರವೇಶ ದ್ವಾರದ ಬಳಿ ಇರುವ ಕಿಟಕಿ ಗಾಜು ಒಡೆದಿದೆ. ಆದರೆ ಕಚೇರಿಯ ಒಳಗಿದ್ದ 5 ಬಿಜೆಪಿ ಕಾರ್ಯಕರ್ತರಿಗೆ ಯಾವುದೇ ಹಾನಿ ಉಂಟಾಗಿಲ್ಲ ಎಂದು ತಿಳಿದುಬಂದಿದೆ. ಬಾಂಬ್ ಸ್ಫೋಟದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಕಚೇರಿಯ ಸಾರ್ವಜನಿಕ ಸಂಪರ್ಕಾಧಿಕಾರಿ ರಾಜೇಶ್ ಚಂದ್ರನ್, ಘಟನೆ ಹಿಂದೆ ಸಿಪಿಎಂ ಕಾರ್ಯಕರ್ತರ ಕೈವಾಡವಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದಾರೆ.

ಬಾಂಬ್ ಸ್ಫೋಟಗೊಳ್ಳುವುದಕ್ಕೂ ಕೆಲವೇ ನಿಮಿಷಗಳ ಹಿಂದೆ, ಕಚೇರಿಯ ಬಳಿ ಇಬ್ಬರು ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ವ್ಯಕ್ತಿಗಳು ನಿಂತಿದ್ದರು ಎಂದು ರಾಜೇಶ್ ಚಂದ್ರನ್ ಮಾಹಿತಿ ನೀಡಿದ್ದಾರೆ. ಸೆ.23 ರಂದು ಕೇರಳದ ತಿರುವನಂತಪುರಂ ನ ಬಿಜೆಪಿ ಕಚೇರಿಯಲ್ಲಿ ನಡೆಯಲಿರುವ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯ ತಯಾರಿಯನ್ನು ಪರಿಶೀಲಿಸಲು ಬಿಜೆಪಿ ರಾಜ್ಯಅಧ್ಯಕ್ಷ ರಾಜಶೇಖರನ್ ಅವರೂ ಕಚೇರಿಗೆ ಹೋರಾಟ ಕೆಲವೇ ಗಂಟೆಗಳಲ್ಲಿ ಬಾಂಬ್ ಸ್ಫೋಟ ನಡೆದಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಬಾಂಬ್ ಸ್ಫೋಟದ ಹಿಂದಿರುವ ದುಷ್ಕರ್ಮಿಗಳನ್ನು ಗುರುತಿಸಲು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

SCROLL FOR NEXT