ರಾಹುಲ್ ಗಾಂಧಿ 
ದೇಶ

ಅಯೋಧ್ಯೆಗೆ ರಾಹುಲ್ ಗಾಂಧಿ ಭೇಟಿ

ಉತ್ತರ ಪ್ರದೇಶದ ಡೆಯೋರಿಯಾದಿಂದ ದೆಹಲಿಗೆ 2500 ಕಿಮಿ ದೂರದ ಕಿಸಾನ್ ಮಹಾಯಾತ್ರೆಯನ್ನು ಕೈಗೊಂಡಿರುವ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ, ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ.

ಲಖನೌ: ಉತ್ತರ ಪ್ರದೇಶದ ಡೆಯೋರಿಯಾದಿಂದ ದೆಹಲಿಗೆ 2500 ಕಿಮಿ ದೂರದ ಕಿಸಾನ್ ಮಹಾಯಾತ್ರೆಯನ್ನು ಕೈಗೊಂಡಿರುವ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ, ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ.

1992 ರಲ್ಲಿ ಬಾಬ್ರಿ ಮಸೀದಿ ಧ್ವಂಸ ಘಟನೆಯ ನಂತರ ನೆಹರು-ಗಾಂಧಿ ಕುಟುಂಬದ ಸದಸ್ಯರೊಬ್ಬರು ಮೊದಲ ಬಾರಿಗೆ ಅಯೋಧ್ಯೆಗೆ ಭೇಟಿ ನೀಡುತ್ತಿದ್ದಾರೆ. ಅಯೋಧ್ಯೆಯಲ್ಲಿರುವ ಹನುಮಾನ್ ಗರ್ಹಿ ದೇವಾಲಯಕ್ಕೆ ಭೇಟಿ ನೀಡಲಿರುವ ರಾಹುಲ್ ಗಾಂಧಿ, ದೇವಾಲಯದ ಮಹಾಂತ್ ಗ್ಯಾನ್ ದಾಸ್ ಅವರನ್ನು ಭೇಟಿ ಮಾಡಿ ಅವರೊಂದಿಗೆ ಚರ್ಚಿಸಲಿದ್ದಾರೆ. ಆದರೆ ವಿವಾದಿತ ರಾಮಜನ್ಮಭೂಮಿ- ಬಾಬ್ರಿ ಮಸೀದಿ ಇರುವ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೋ ಇಲ್ಲವೋ ಎಂಬ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ.

ರಾಜಕೀಯ ವಿಶ್ಲೇಷಕರ ಪ್ರಕಾರ, ಕೇಂದ್ರದಲ್ಲಿ ಆಡಳಿತದಲ್ಲಿರುವ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಪರ್ಯಾಯವಾಗಿ, ಹಿಂದುತ್ವದ ಪರ ಕಾರ್ಯಸೂಚಿಯೊಂದಿಗೆ ರಾಹುಲ್ ಗಾಂಧಿ ಅಯೋಧ್ಯೆಗೆ ಭೇಟಿ ನೀಡುತ್ತಿದ್ದಾರೆ ಎಂದು ಹೇಳಲಾಗಿದೆ. ಅಯೋಧ್ಯೆಗೆ ಭೇಟಿ ನೀಡಿದ ಬಳಿಕ ಫೈಜಾಬಾದ್ ನಲ್ಲಿ ರಾಹುಲ್ ಗಾಂಧಿ ಅವರು ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ ಕೆ ಶಿವಕುಮಾರ್ ಸ್ಫೋಟಕ ಆರೋಪ; Video

'Evil Dead': ನಟ ನಾನಾ ಪಾಟೇಕರ್ ಸಾವು, #MeToo ಆರೋಪ ಮಾಡಿದ್ದ ನಟಿ ತನುಶ್ರೀ ದತ್ತಾ ಹೇಳಿದ್ದೇನು? ವಿಚಿತ್ರ ಪೋಸ್ಟ್!

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ CWRC ಮತ್ತೆ ಶಾಕ್: ತಮಿಳುನಾಡಿಗೆ ನಿತ್ಯ 3,000 ಕ್ಯೂಸೆಕ್ ನೀರು ಹರಿಸಲು ಸೂಚನೆ

ಬೆಂಗಳೂರಿನಿಂದ ಸಾಗರಕ್ಕೆ ಬರುತ್ತಿದ್ದ ಬಸ್‌ಗೆ ಬೆಂಕಿ; ಚಾಲಕ-ಕ್ಲೀನರ್ ಸಮಯಪ್ರಜ್ಞೆಯಿಂದ ಪ್ರಯಾಣಿಕರು ಸೇಫ್, Video

'ವಿರಾಟ್ ಕೊಹ್ಲಿ ಬೇಗ ಔಟಾದರೆ ನನಗೆ ಊಟವೇ ಸೇರಲ್ಲ': ಸ್ಟಾರ್ ಬ್ಯಾಟರ್ ಬಗ್ಗೆ ನಾನಾ ಪಾಟೇಕರ್ ಹೇಳಿಕೆಯ ಹಳೆಯ ವಿಡಿಯೋ ವೈರಲ್