ಮಹಾಂತ ಜ್ಞಾನ್‌ ದಾಸ್‌ ರೊಂದಿಗೆ ರಾಹುಲ್ ಗಾಂಧಿ 
ದೇಶ

ಅಯೋಧ್ಯೆಯಲ್ಲಿ ರಾಹುಲ್, ರಾಮಜನ್ಮಭೂಮಿ-ಬಾಬ್ರಿಯಿಂದ ದೂರ ಉಳಿದ ಕಾಂಗ್ರೆಸ್ ನಾಯಕ

ಉತ್ತರ ಪ್ರದೇಶದ ಡೆಯೋರಿಯಾದಿಂದ ದೆಹಲಿಗೆ 2500 ಕಿ.ಮೀ ದೂರದ ಕಿಸಾನ್ ಮಹಾಯಾತ್ರೆ ಕೈಗೊಂಡಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಶುಕ್ರವಾರ...

ಲಖನೌ: ಉತ್ತರ ಪ್ರದೇಶದ ಡೆಯೋರಿಯಾದಿಂದ ದೆಹಲಿಗೆ 2500 ಕಿ.ಮೀ ದೂರದ ಕಿಸಾನ್ ಮಹಾಯಾತ್ರೆ ಕೈಗೊಂಡಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಶುಕ್ರವಾರ ಅಯೋಧ್ಯೆಗೆ ಭೇಟಿ ನೀಡಿದ್ದು, ಈ ಮೂಲಕ 1992 ರಲ್ಲಿ ಬಾಬ್ರಿ ಮಸೀದಿ ಧ್ವಂಸ ಘಟನೆಯ ನಂತರ ಆಯೋಧ್ಯಗೆ ಭೇಟಿ ನೀಡಿದ ನೆಹರು-ಗಾಂಧಿ ಕುಟುಂಬದ ಮೊದಲ ವ್ಯಕ್ತಿ ಅನಿಸಿಕೊಂಡಿದ್ದಾರೆ. ಆದರೆ ವಿವಾದಿತ ರಾಮಜನ್ಮಭೂಮಿ ಮತ್ತು ಬಾಬರಿ ಮಸೀದಿ ತಾಣದಿಂದ ದೂರ ಉಳಿದಿದ್ದಾರೆ.

ಮಹಾಯಾತ್ರೆಯ ನಾಲ್ಕನೆ ದಿನವಾದ ಇಂದು ಅಯೋಧ್ಯೆಯಲ್ಲಿರುವ ಹನುಮಾನ್ ಗರ್ಹಿ ದೇವಾಲಯಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ರಾಹುಲ್ ಗಾಂಧಿ ವಿವಾದಿತ ರಾಮಜನ್ಮಭೂಮಿ - ಬಾಬರಿ ತಾಣಕ್ಕೆ ಭೇಟಿ ನೀಡಲಿಲ್ಲ.

ಇದೇ ವೇಳೆ ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರವನ್ನು ನಿರ್ಮಿಸಬೇಕೆಂದು ಪ್ರತಿಪಾದಿಸುತ್ತಾ ಬಂದಿರುವ ವಿಶ್ವ ಹಿಂದೂ ಪರಿಷತ್ ವಿರುದ್ಧದ ಕಟ್ಟಾ ಟೀಕಾಕಾರರಾಗಿರುವ ಮಹಾಂತ ಜ್ಞಾನ್‌ ದಾಸ್‌ ಅವರನ್ನು ರಾಹುಲ್ ಗಾಂಧಿ ಭೇಟಿ ಮಾಡಿದರು.

ರಾಮಜನ್ಮಭೂಮಿ ಹಾಗೂ ಬಾಬರಿ ಮಸೀದಿಯಿಂದ ಹನುಮಾನ್ ಗರ್ಹಿ ದೇವಾಲಯ ಕೇವಲ ಒಂದು ಕಿ.ಮೀ.ದೂರದಲ್ಲಿದೆ. ಆದರೂ ಇಲ್ಲಿಗೆ ಭೇಟಿ ನೀಡದೆ ಅಂಬೆಡ್ಕರ್ ನಗರದಲ್ಲಿರುವ ಕಿಚೌಚ ಶರೀಫ್ ದರ್ಗಾಗೆ ಭೇಟಿ ನೀಡುವ ಮೂಲಕ ಸಮತೋಲನ ಕಾಯ್ದುಕೊಳ್ಳಲು ಯತ್ನಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಸ್ಪಾದಲ್ಲಿ ಅಕ್ರಮ ಚಟುವಟಿಕೆ' ಎಂದು ಆರೋಪಿಸಿ ದಾಂಧಲೆ; 5 ಲಕ್ಷ ರೂ ಗೆ ಬೇಡಿಕೆ, 1 ಲಕ್ಷ ವಸೂಲಿ! ಶಾಕಿಂಗ್ ಘಟನೆ

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್