ಬೆಂಬಲಿಗರತ್ತ ಕೈ ಬೀಸುತ್ತಿರುವ ಮುಖ್ಯಮಂತ್ರಿ ಜೆ.ಜಯಲಲಿತಾ 
ದೇಶ

ಪ್ಯಾರಾಲಿಂಪಿಕ್ ಚಿನ್ನದ ಪದಕ ವಿಜೇತ ಮರಿಯಪ್ಪನ್ ಗೆ 2 ಕೋಟಿ ರೂ. ಬಹುಮಾನ ಘೋಷಿಸಿದ ಜಯಲಲಿತಾ

ಬ್ರೆಝಿಲ್ ನ ರಿಯೊ ಡಿ ಜನೈರೊದಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ ನಲ್ಲಿ ಹೈ ಜಂಪ್ ವಿಭಾಗದಲ್ಲಿ ಚಿನ್ನದ ಪದಕ ಗೆದ್ದ ಟಿ.ಮರಿಯಪ್ಪನ್ ಗೆ...

ಚೆನ್ನೈ: ಬ್ರೆಝಿಲ್ ನ ರಿಯೊ ಡಿ ಜನೈರೊದಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ ನಲ್ಲಿ ಹೈ ಜಂಪ್ ವಿಭಾಗದಲ್ಲಿ ಚಿನ್ನದ ಪದಕ ಗೆದ್ದ ಟಿ.ಮರಿಯಪ್ಪನ್ ಗೆ ತಮಿಳು ನಾಡು ಮುಖ್ಯಮಂತ್ರಿ ಜೆ.ಜಯಲಲಿತಾ 2 ಕೋಟಿ ರೂಪಾಯಿ ನಗದು ಬಹುಮಾನ ಘೋಷಿಸಿದ್ದಾರೆ.
ತಮಿಳು ನಾಡು ಜನತೆ ಪರವಾಗಿ ಮರಿಯಪ್ಪನ್ ಗೆ ಬರೆದ ಪತ್ರದಲ್ಲಿ ಅಭಿನಂದನೆ ಹೇಳಿದ ಅವರು, ನಿಮ್ಮ ಸಾಧನೆಯಿಂದ ನಾನು ಬಹಳ ಸಂತೋಷಗೊಂಡಿದ್ದೇನೆ ಎಂದು ಹೇಳಿದ್ದಾರೆ.
''ಪ್ಯಾರಾಲಿಂಪಿಕ್ ನ ಹೈ ಜಂಪ್ ವಿಭಾಗದಲ್ಲಿ ಭಾರತೀಯರೊಬ್ಬರು ಚಿನ್ನದ ಪದಕ ಗೆದ್ದಿರುವುದು ಇದೇ ಮೊದಲು. 1.89 ಮೀಟರ್ ಎತ್ತರ ನೆಗೆಯುವ ಮೂಲಕ ನೀವು ಇತಿಹಾಸ ನಿರ್ಮಿಸಿ ದೇಶ ತಮಿಳು ನಾಡು ರಾಜ್ಯ ಹೆಮ್ಮೆಪಡುವಂತ ಕೆಲಸ ಮಾಡಿದ್ದೀರಿ. ಅನೇಕ ಅಡೆತಡೆಗಳನ್ನು ನಿವಾರಿಸಿ ನೀವು ಸಾಧನೆ ಮಾಡಿದ್ದೀರಿ. ನಿಮ್ಮ ಈ ಸಾಧನೆ ಅನೇಕ ಮಕ್ಕಳಿಗೆ ಮತ್ತು ಯುವಕ, ಯುವತಿಯರಿಗೆ ಸ್ಪೂರ್ತಿ ನೀಡಲಿದೆ'' ಎಂದು ಹೇಳಿದ್ದಾರೆ.
ಮರಿಯಪ್ಪನ್ ಇಂದು ಇಡೀ ದೇಶ ಹೆಮ್ಮೆಪಡುವಂಥ ಸಾಧನೆ ಮಾಡಲು ಅವರಿಗೆ ಸಹಾಯ ಮಾಡಿದವರಿಗೂ ಮುಖ್ಯಮಂತ್ರಿ ಜಯಲಲಿತಾ ಇದೇ ಸಂದರ್ಭದಲ್ಲಿ ಅಭಿನಂದನೆ ಹೇಳಿದರು.ತಮ್ಮ ಎಲ್ಲಾ ಅಡ್ಡಿ, ಆತಂಕಗಳನ್ನು ಮೀರಿ ಸಾಧನೆ ಮಾಡಲು ತುಡಿಯುತ್ತಿರುವವರಿಗೆ ನೀವು ಮಾದರಿಯಾಗಲಿದ್ದೀರಿ ಎಂದು ಜಯಲಲಿತಾ ಪತ್ರದಲ್ಲಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಸ್ತೂರಿರಂಗನ್ ವರದಿಯ ಭೌತಿಕ ಸಮೀಕ್ಷೆ ಬಗ್ಗೆ ಜನರ ಅಹವಾಲು ಆಲಿಸಿ ಅಧಿಕಾರಿಗಳೊಂದಿಗೆ ಚರ್ಚಿಸಿ ತೀರ್ಮಾನ: ಸಿಎಂ; Video

'ಒಳ ಉಡುಪಿನಲ್ಲಿ ಆ ದೃಶ್ಯ ಮಾಡಿ ಅಂದ್ರು': ಬಾಲಿವುಡ್ ನಿರ್ದೇಶಕರ ಕರಾಳ ಮುಖ ಬಿಚ್ಚಿಟ್ಟ ನಟಿ ರಾಧಿಕಾ ಆಪ್ಟೆ!

ದೆಹಲಿ ವಿವಿ ಚುನಾವಣೆಯಲ್ಲಿ ಇತಿಹಾಸ ಸೃಷ್ಟಿಸಿದ ಬಸ್ ಕಂಡಕ್ಟರ್ ಮಗ; ಗೆಲುವಿಗೆ ಕಾರಣ ಬಿಚ್ಚಿಟ್ಟ ದೀಪಾಂಶು!

ಶಾಲಾ ಮೆಟ್ಟಿಲು ಹತ್ತುವ ವೇಳೆ ಕಾಲುಜಾರಿ ಬಿದ್ದು 4ನೇ ತರಗತಿ ವಿದ್ಯಾರ್ಥಿನಿ ದುರಂತ ಸಾವು, Video Viral

ದೆಹಲಿ ವಿವಿ ಚುನಾವಣೆ ಫಲಿತಾಂಶ ಪ್ರಕಟ: 4 ಹುದ್ದೆಗಳ ಪೈಕಿ 3ರಲ್ಲಿ ABVP ಭರ್ಜರಿ ಜಯ; ಉಪಾಧ್ಯಕ್ಷ ಸ್ಥಾನ ಗೆದ್ದು ಇತಿಹಾಸ ಸೃಷ್ಟಿಸಿದ ಪಕ್ಷೇತರ!