ಕಾಶ್ಮೀರದಲ್ಲಿ ಕರ್ಫ್ಯೂ, ನಿಷೇಧಾಜ್ಞೆ ಮುಂದುವರಿಕೆ 
ದೇಶ

ಕಾಶ್ಮೀರದಲ್ಲಿ ಕರ್ಫ್ಯೂ, ನಿಷೇಧಾಜ್ಞೆ ಮುಂದುವರಿಕೆ

ಉಗ್ರ ಬುರ್ಹಾನ್ ವಾನಿ ಹತ್ಯೆ ಖಂಡಿಸಿ ಕಾಶ್ಮೀರದಲ್ಲಿ ಭುಗಿಲೆದ್ದಿದ್ದ ಹಿಂಸಾಚಾರವನ್ನು ಹತ್ತಿಕ್ಕುವ ಸಲುವಾಗಿ ಹೇರಲಾಗಿದ್ದ ಕರ್ಫ್ಯೂ ಮತ್ತು ನಿಷೇಧಾಜ್ಞೆಯನ್ನು ಬುಧವಾರ ಕೂಡ...

ಶ್ರೀನಗರ: ಉಗ್ರ ಬುರ್ಹಾನ್ ವಾನಿ ಹತ್ಯೆ ಖಂಡಿಸಿ ಕಾಶ್ಮೀರದಲ್ಲಿ ಭುಗಿಲೆದ್ದಿದ್ದ ಹಿಂಸಾಚಾರವನ್ನು ಹತ್ತಿಕ್ಕುವ ಸಲುವಾಗಿ ಹೇರಲಾಗಿದ್ದ ಕರ್ಫ್ಯೂ ಮತ್ತು ನಿಷೇಧಾಜ್ಞೆಯನ್ನು ಬುಧವಾರ ಕೂಡ ಮುಂದುವರೆಸಲಾಗಿದೆ.

ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಇಂದು ಕೂಡ ಕಾಶ್ಮೀರದ ಹಲವೆಡೆ ಕರ್ಫ್ಯೂ ಹಾಗೂ ನಿಷೇಧಾಜ್ಞೆಯನ್ನು ಮುಂದುವರೆಸಲಾಗುತ್ತಿದ್ದು, ರಸ್ತೆಗಳನ್ನು ಬಂದ್ ಮಾಡುವಂತೆ ಅಲ್ಲಿನ ಪ್ರತ್ಯೇಕತಾವಾದಿಗಳು ಕರೆ ನೀಡಿದ್ದಾರೆ.

ಕೆಲ ದಿನಗಳ ಹಿಂದಷ್ಟೇ ಕಾಶ್ಮೀರದಲ್ಲಿ ಮತ್ತೆ ಹಿಂಸಾಚಾರ ಮರುಕಳಿಸಿತ್ತು. ಘಟನೆ ವೇಳೆ ಇಬ್ಬರು ಯುವಕರು ಮೃತಪಟ್ಟಿದ್ದರು. ಇದರಂತೆ ಸಾವನ್ನಪ್ಪಿದ್ದವರ ಸಂಖ್ಯೆ 78ಕ್ಕೆ ಏರಿಕೆಯಾಗಿತ್ತು.

ಈ ಹಿನ್ನೆಲೆಯಲ್ಲಿ ಬಾರಮುಲ್ಲಾ, ತಂಗ್ಮಾರ್ಗ್, ಪಟ್ಟನ್ ಮತ್ತು ಹಂದ್ವಾರ ಪ್ರದೇಶಗಳಳ್ಲಿ ಕರ್ಫ್ಯೂ ಹಾಗೂ ನಿಷೇಧಾಜ್ಞೆಯನ್ನು ಮುಂದುವರೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!