ಮುಂಬೈ: ಮುಂಬೈನ ಕಂದಿವಾಲಿಯ ಎಸ್ವಿ ರಸ್ತೆಯಲ್ಲಿರುವ ಹಿರಾನಂದಾನಿ ಟವರ್ ನ 32ನೇ ಅಂತಸ್ತಿನಲ್ಲಿ ಬೆಂಕಿ ಅವಘಡ ಸಂಭವಿಸಿದೆ.
ಅಪಾರ್ಟ್‌ಮೆಂಟ್‌ನ 32ನೇ ಅಂತಸ್ತಿನಲ್ಲಿ ಮಧ್ಯಾಹ್ನ 1.09ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು ದಟ್ಟ ಹೊಗೆ ಆಕಾಶದೆತ್ತರಕ್ಕೆ ಹರಡಿದೆ. ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಘಟನಾ ಸ್ಥಳಕ್ಕೆ 8 ಅಗ್ನಿಶಾಮಕ ಸಿಬ್ಬಂದಿ, 2 ಆ್ಯಂಬುಲೆನ್ಸ್ ಮತ್ತು ಮೂರು ನೀರಿನ ಟ್ಯಾಂಕರ್ ಗಳು ತಲುಪಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿವೆ.
ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಟ್ಟಡದಲ್ಲಿ ವಾಸವಿದ್ದವರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದ್ದು ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿದ ವರದಿಯಾಗಿಲ್ಲ.