ನವದೆಹಲಿ: ಬಿಜೆಪಿ ಸಂಸದ ಹಾಗೂ ಬುಕಟ್ಟು ವ್ಯವಹಾರಗಳ ರಾಜ್ಯಖಾತೆ ಸಚಿವ ಜೆ.ಎಸ್ ಬಾಬೋರ್ ಮನೆಗೆ ನುಗ್ಗಿದ ಅಪರಿಚಿತ ವ್ಯಕ್ತಿಗಳು ಯಾವುದೇ ಬೆಲೆಬಾಳುವ ವಸ್ತುಗಳನ್ನು ಕದಿಯದೇ ಪರಾರಿಯಾಗಿದ್ದಾರೆ.
ಸೋಮವಾರ ಮನೆಯ ಮುಂದಿನ ಗ್ರಿಲ್ ಗಳನ್ನು ಮುರಿದು ನುಗ್ಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೊದಲು ಮನೆ ಕೆಲಸದವರು ಮೊಬೈಲ್ ಹಾಗೂ ಟ್ಯಾಬ್ಲೆಟ್ ಕಾಣೆಯಾಗಿವೆ ಎಂದು ದೂರಿದ್ದರು, ನಂತರ ಕಾಣೆಯಾಗಿದ್ದ ಎಲ್ಲಾ ವಸ್ತುಗಳು ಪತ್ತೆಯಾಗಿರುವುದಾಗಿ ತಿಳಿದು ಬಂದಿದೆ.
ಯಾವುದೇ ಚಿನ್ನಾಭರಣ ಕಳ್ಳತನವಾಗಿರುವ ಬಗ್ಗೆ ಮಾಹಿತಿ ತಿಳಿದು ಬಂದಿಲ್ಲ. ದೆಹಲಿ ಪೊಲೀಸರು ಪ್ರಕರಣ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಿದ್ದಾರೆ.