ದೇಶ

ಅರುಣಾಚಲದಲ್ಲಿ ರಾಜಕೀಯ ಬಿಕ್ಕಟ್ಟು, ಮತ್ತೆ ಅಧಿಕಾರ ಕಳೆದುಕೊಂಡ ಕಾಂಗ್ರೆಸ್

ಅರುಣಾಚಲ ಪ್ರದೇಶದಲ್ಲಿ ಮತ್ತೆ ರಾಜಕೀಯ ಬಿಕ್ಕಟ್ಟು ಉಂಟಾಗಿದ್ದು, ಕಾಂಗ್ರೆಸ್ ಗೆ ತೀವ್ರ ಹಿನ್ನೆಡೆಯಾಗಿದೆ.

ಇಟಾನಗರ್: ಅರುಣಾಚಲ ಪ್ರದೇಶದಲ್ಲಿ ಮತ್ತೆ ರಾಜಕೀಯ ಬಿಕ್ಕಟ್ಟು ಉಂಟಾಗಿದ್ದು, ಕಾಂಗ್ರೆಸ್ ಗೆ ತೀವ್ರ ಹಿನ್ನೆಡೆಯಾಗಿದೆ. 
ಇತ್ತೀಚಿಗಷ್ಟೇ ಅರುಣಾಚಲ ಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದ ಪೆಮಾ ಖಂಡು ಸೇರಿದಂತೆ ಎಲ್ಲಾ 43 ಕಾಂಗ್ರೆಸ್ ಶಾಸಕರು ಶುಕ್ರವಾರ ಪಕ್ಷಕ್ಕೆ ರಾಜಿನಾಮೆ ನೀಡಿ, ನಾಟಕೀಯ ಬೆಳವಣಿಗೆಯಲ್ಲಿ ಪೀಪಲ್ಸ್ ಪಾರ್ಟಿ ಆಫ್ ಅರುಣಾಚಲ್(ಪಿಪಿಎ) ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಇದರೊಂದಿಗೆ ಬಿಜೆಪಿಯ ರಾಜಕೀಯ ಚದುರಂಗದಾಟದಲ್ಲಿ ಅರುಣಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಮತ್ತೊಮ್ಮೆ ಅಧಿಕಾರ ಕಳೆದುಕೊಂಡಂತಾಗಿದೆ.
ಎರಡು ತಿಂಗಳ ಹಿಂದಷ್ಟೇ ರಾಜಕೀಯ ಬಿಕ್ಕಟ್ಟು ಪ್ರಕರಣದಲ್ಲಿ ಮಧ್ಯಪ್ರವೇಶಿಸಿದ್ದ ಸುಪ್ರೀಂಕೋರ್ಟ್ ಆದೇಶದಿಂದಾಗಿ ಅರುಣಾಚಲಪ್ರದೇಶದಲ್ಲಿ ಪೆಮಾ ಖಂಡು ಮುಖ್ಯಮಂತ್ರಿಯಾಗುವ ಮೂಲಕ ಕಾಂಗ್ರೆಸ್ ಸರ್ಕಾರ ಪುನಾ ಸ್ಥಾಪನೆಯಾಗಿತ್ತು. ಆದರೆ ಇದೀಗ ದಿಢೀರ್ ರಾಜಕೀಯ ಬೆಳವಣಿಗೆ ಎಂಬಂತೆ ಸಿಎಂ ಹಾಗೂ 43 ಮಂದಿ ಕಾಂಗ್ರೆಸ್ ಶಾಸಕರು ಪಕ್ಷಕ್ಕೆ ಗುಡ್ ಬೈ ಹೇಳಿ ಬಿಜೆಪಿ ಮೈತ್ರಿಕೂಟದ ಪಿಪಿಎಗೆ ಸೇರ್ಪಡೆಗೊಂಡಿದ್ದಾರೆ. ಆ ಮೂಲಕ ಅರುಣಾಚಲದಲ್ಲಿದ್ದ ಕಾಂಗ್ರೆಸ್ ಸರ್ಕಾರ ಬಿದ್ದು ಹೋದಂತಾಗಿದ್ದು, ಪಿಪಿಎ (ಪೀಪಲ್ಸ್ ಪಾರ್ಟಿ ಆಫ್ ಅರುಣಾಚಲ್) ಸರ್ಕಾರ ಅಸ್ತಿತ್ವಕ್ಕೆ ಬಂದಂತಾಗಿದೆ.
ಮಾಜಿ ಮುಖ್ಯಮಂತ್ರಿ ನಬಂ ಟುಕಿ ಮಾತ್ರ ಕಾಂಗ್ರೆಸ್ ಪಕ್ಷದಲ್ಲೇ ಉಳಿದುಕೊಂಡಿದ್ದು, ಉಳಿದೆಲ್ಲಾ ಕಾಂಗ್ರೆಸ್ ಶಾಸಕರು ಪಿಪಿಎ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಜುಲೈ ತಿಂಗಳಲ್ಲಿ ಆರಂಭಗೊಂಡಿದ್ದ ರಾಜಕೀಯದ ಹೈಡ್ರಾಮಾದಲ್ಲಿ ನಬಂ ಟುಕಿ ಬಹುಮತ ಸಾಬೀತುಪಡಿಸುವ ಮುನ್ನವೇ ಡಿಢೀರ್ ರಾಜಕೀಯ ಬೆಳವಣಿಗೆ ಎಂಬಂತೆ ಸಿಎಂ ರೇಸ್ ನಿಂದ ಹಿಂದೆ ಸರಿದಿದ್ದರು. ಬಳಿಕ ಪೆಮಾ ಖಂಡು ತನಗೆ ಎಲ್ಲಾ ಶಾಸಕರ ಬೆಂಬಲ ಇರೋದಾಗಿ ಘೋಷಿಸಿದ್ದರು. ತದನಂತರ ಪೆಮಾ ಖಂಡು ಅರುಣಾಚಲಪ್ರದೇಶದ ಸಿಎಂ ಆಗಿ ಅಧಿಕಾರ ಸ್ವೀಕರಿಸಿದ್ದರು.
60 ಸದಸ್ಯ ಬಲ ಹೊಂದಿರುವ ಅರುಣಾಚಲ ಪ್ರದೇಶ ವಿಧಾನಸಭೆಯಲ್ಲಿ 45(+2) ಮಂದಿ ಕಾಂಗ್ರೆಸ್ ಶಾಸಕರಿದ್ದರು, ಬಿಜೆಪಿ 11 ಹಾಗೂ ಇಬ್ಬರು ಪಕ್ಷೇತರ ಶಾಸಕರನ್ನು ಹೊಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್