ಸೌಂದರ್ಯ ರಜನಿಕಾಂತ್ 
ದೇಶ

ಭಾರತೀಯ ಪ್ರಾಣಿ ದಯಾ ಮಂಡಳಿಯ ರಾಯಭಾರಿಯಾಗಿ ಸೌಂದರ್ಯ ರಜನಿಕಾಂತ್ ನೇಮಕ

ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಅವರ ಪುತ್ರಿ ಸೌಂದರ್ಯ ಅವರು ಭಾರತೀಯ ಪ್ರಾಣಿ ದಯಾ ಮಂಡಳಿಯ ರಾಯಭಾರಿಯಾಗಿ...

ಚೆನ್ನೈ: ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಅವರ ಪುತ್ರಿ ಸೌಂದರ್ಯ ಅವರು ಭಾರತೀಯ ಪ್ರಾಣಿ ದಯಾ ಮಂಡಳಿಯ ರಾಯಭಾರಿಯಾಗಿ ಹಾಗೂ ಮಂಡಳಿಯ ಸಹ ಸದಸ್ಯರಾಗಿ ನೇಮಕಗೊಂಡಿದ್ದಾರೆ.
ಸೌಂದರ್ಯ ರಜನಿಕಾಂತ್ ಅವರು ಪ್ರಾಣಿ ದಯಾ ಮಂಡಳಿ ಸಹ ಸದಸ್ಯರಾಗಿ ಕಾರ್ಯನಿರ್ವಹಿಸಲು ಒಪ್ಪಿಕೊಂಡಿದ್ದಾರೆ ಎಂದು ಹೇಳಲು ನಮಗೆ ತುಂಬಾ ಸಂತೋಷವಾಗುತ್ತಿದೆ ಎಂದು ಭಾರತೀಯ ಪ್ರಾಣಿ ದಯಾ ಮಂಡಳಿಯ ಉಪಾಧ್ಯಕ್ಷ ಎಸ್. ಚಿನ್ನೆಕೃಷ್ಣ ಅವರು ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದ್ದಾರೆ.
ಚಿತ್ರೋದ್ಯಮದಲ್ಲಿ ತೊಡಗಿಕೊಂಡಿರುವ ಸೌಂದರ್ಯ ಅವರು ಕಂಪ್ಯೂಟರ್ ಗ್ರಾಫಿಕ್ಸ್ ಮತ್ತು ಆನಿಮೇಷನ್ ನಲ್ಲಿ ವಿಶೇಷ ಆಸಕ್ತಿ ಹೊಂದಿದ್ದು, ಅವರಿಂದ ಪ್ರಾಣಿ ದಯಾ ಮಂಡಳಿಗೆ ಸಾಕಷ್ಟು ಸಹಾಯವಾಗಲಿದೆ ಎಂದು ಹೇಳಿದ್ದಾರೆ.
ಸೌಂದರ್ಯ ಅವರು ಭಾರತೀಯ ಪ್ರಾಣಿ ದಯಾ ಮಂಡಳಿಯ ರಾಯಭಾರಿಯಾಗಿ ಸಿನಿಮಾಗಳಲ್ಲಿ ಬಳಸುವ ಪ್ರಾಣಿಗಳ ರಕ್ಷಣೆ ಬಗ್ಗೆ ಕಾಳಜಿ ವಹಿಸಲಿದ್ದಾರೆ ಎಂದು ಚಿನ್ನೆಕೃಷ್ಣ ಅವರು ತಿಳಿಸಿದ್ದಾರೆ.
ಚೆನ್ನೈನಲ್ಲಿ ಮುಖ್ಯ ಕಚೇರಿಯನ್ನು ಹೊಂದಿರುವ ಭಾರತೀಯ ಪ್ರಾಣಿ ದಯಾ ಮಂಡಳಿ,ಪರಿಸರ ಮತ್ತು ಅರಣ್ಯ ಸಚಿವಾಲಯದಡಿ ಕಾರ್ಯನಿರ್ವಹಿಸುತ್ತದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?