ಮುಲಾಯಂ ಸಿಂಗ್ ಯಾದವ್ 
ದೇಶ

ಅಖಿಲೇಶ್ ಯಾದವ್ ನಿಂದ ಪ್ರಧಾನಿ ಹುದ್ದೆ ಕೈತಪ್ಪಿತು: ಮುಲಾಯಂ ಸಿಂಗ್ ಯಾದವ್ ಅಸಮಾಧಾನ

ಸಮಾಜವಾದಿ ಪಕ್ಷದಲ್ಲಿ ಉಂಟಾಗಿರುವ ಭಿನ್ನಮತ ಶಮನಕ್ಕೆ ಮುಲಾಯಂ ಸಿಂಗ್ ಯಾದವ್ ರಾಜಿ ಸೂತ್ರಗಳನ್ನು ನೀಡಿದ್ದಾರೆ ಆದರೂ ಸಹ ಸಾರ್ವಜನಿಕವಾಗಿ ತಮ್ಮ ಪುತ್ರ ಅಖಿಲೇಶ್ ಯಾದವ್ ಅವರ ಕಿವಿ ಹಿಂಡುವುದನ್ನು ನಿಲ್ಲಿಸಿಲ್ಲ.

ಲಖನೌ: ಸಮಾಜವಾದಿ ಪಕ್ಷದಲ್ಲಿ ಉಂಟಾಗಿರುವ ಭಿನ್ನಮತ ಶಮನಕ್ಕೆ ಮುಲಾಯಂ ಸಿಂಗ್ ಯಾದವ್ ರಾಜಿ ಸೂತ್ರಗಳನ್ನು ನೀಡಿದ್ದಾರೆ ಆದರೂ ಸಹ ಸಾರ್ವಜನಿಕವಾಗಿ ತಮ್ಮ ಪುತ್ರ ಅಖಿಲೇಶ್ ಯಾದವ್ ಅವರ ಕಿವಿ ಹಿಂಡುವುದನ್ನು ನಿಲ್ಲಿಸಿಲ್ಲ.

ರಾಜಿಸೂತ್ರಗಳನ್ನು ನೀಡಿದ ಬಳಿಕವೂ ಉತ್ತರ ಪ್ರದೇಶ ಸಿಎಂ ಅಖಿಲೇಶ್ ಯಾದವ್ ಅವರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಸಮಾಜವಾದಿ ಪಕ್ಷದ ಮುಖಂಡ ಮುಲಾಯಂ ಸಿಂಗ್ ಯಾದವ್, ಅಖಿಲೇಶ್ ಯಾದವ್ ರಿಂದ ತಮಗೆ ಪ್ರಧಾನಿ ಪಟ್ಟ ಕೈತಪ್ಪಿದೆ ಎಂದು ಆರೋಪಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷ ಅಧಿಕಾರಕ್ಕೆ ಬರಲು ಸಹೋದರ ಶಿವ್ ಪಾಲ್ ಯಾದವ್ ಅವರ ಕೊಡುಗೆಯನ್ನು ಪ್ರಸ್ತಾಪಿಸಿರುವ ಮುಲಾಯಂ ಸಿಂಗ್ ಯಾದವ್, ಪಕ್ಷದ ಯಶಸ್ಸಿಗೆ ಸಿಎಂ ಅಖಿಲೇಶ್ ಯಾದವ್ ಅವರ ಕೊಡುಗೆಯೇನು ಎಂದು ಪ್ರಶ್ನಿಸಿದ್ದಾರೆ. ಅಷ್ಟೇ ಅಲ್ಲದೆ 2012 ರಲ್ಲಿ ಪಕ್ಷ ಅಧಿಕಾರಕ್ಕೆ ಬಂದಾಗ ಅಖಿಲೇಶ್ ಯಾದವ್ ಅವರನ್ನು ಸಿಎಂ ಮಾಡುವುದಕ್ಕೆ ಶಿವಪಾಲ್ ಯಾದವ್ ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೆ 2014 ರ ಲೋಕಸಭಾ ಚುನಾವಣೆ ಬಳಿಕ ಉನ್ನತ ಹುದ್ದೆ ನೀಡುವಂತೆ ಸಲಹೆ ನೀಡಿದ್ದರು. ಆದರೆ ಕಾಲಕ್ರಮೇಣ ಎಲ್ಲವು ಬದಲಾಗಿ ಅಖಿಲೇಶ್ ಯಾದವ್ ಅವರನ್ನು ಶಾಸಕಾಂಗ ಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡಲಾಯಿತು. ಮುಖ್ಯಮಂತ್ರಿ  ಆದರೂ ಅಖಿಲೇಶ್ ಯಾದವ್ ಅವರಿಂದ ಆದ ಪ್ರಯೋಜನವೇನು, ಲೋಕಸಭಾ ಚುನಾವಣೆಯಲ್ಲಿ ಕುಟುಂಬದ 5 ಜನರು ಮಾತ್ರ ಆಯ್ಕೆ ಗೊಂಡರು  ಎಂದು ಮುಲಾಯಂ ಸಿಂಗ್ ಯಾದವ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

"2012 ರ ವಿಧಾನಸಭಾ ಚುನಾವಣೆಯಲ್ಲಿ ಅಖಿಲೇಶ್ ಯಾದವ್ ಅವರ ಮಾತನ್ನು ಕೇಳಿದಿದ್ದರೆ ಲೋಕಸಭಾ ಚುನಾವಣೆಯಲ್ಲಿ 30-35 ಲೋಕಸಭಾ ಕ್ಷೇತ್ರಗಳನ್ನು ಗೆದ್ದು ಪ್ರಧಾನಿಯಾದರೂ ಆಗಬಹುದಿತ್ತು, ಅಖಿಲೇಶ್ ಯಾದವ್ ನಿಂದಾಗಿ ಪ್ರಧಾನಿ ಹುದ್ದೆಯನ್ನು ಕಳೆದುಕೊಂಡೆ ಎಂದು ಮುಲಾಯಂ ಸಿಂಗ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ".

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

ಮಗು ಆಡಿಸುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ; ರಕ್ಷಣೆಗೆ ಧಾವಿಸಿದ ಮಹಿಳೆ, Video ವೈರಲ್

'ಭಾರತೀಯನ ಮದುವೆಯಾದಾಕ್ಷಣ Indian ಆಗಲ್ಲ, ಬಾಂಗ್ಲಾದೇಶಿ ಪತ್ನಿಗೆ ಭಾರತ ಪ್ರವೇಶ ನಿರಾಕರಣೆ ಸರಿ ಇದೆ': ಹೈಕೋರ್ಟ್

CM ಡಿ.ಕೆ. ಶಿವಕುಮಾರ್‌ಗಾಗಿ IndiGo flight ಲೇಟ್? VVIP ಸಂಸ್ಕೃತಿ ವಿರುದ್ಧ ಪ್ರಯಾಣಿಕರ ಆಕ್ರೋಶ..!