ಕಪಿಲ್ ಶರ್ಮಾ 
ದೇಶ

ನಟ ಕಪಿಲ್ ಶರ್ಮಾ ವಿರುದ್ಧ ಎಫ್ಐಆರ್ ದಾಖಲು

ಬೃಹತ್‌ ಮುಂಬಯಿ ಮಹಾನಗರ ಪಾಲಿಕೆ(ಬಿಎಂಸಿ)ಯ ಅಧಿಕಾರಿಗಳು ತನ್ನಿಂದ ಐದು ಲಕ್ಷ ರು. ಲಂಚ ಕೇಳಿ ತನಗೆ ಕಿರುಕುಳ ನೀಡಿದ್ದಾರೆ...

ಮುಂಬೈ: ಬೃಹತ್‌ ಮುಂಬಯಿ ಮಹಾನಗರ ಪಾಲಿಕೆ(ಬಿಎಂಸಿ)ಯ ಅಧಿಕಾರಿಗಳು ತನ್ನಿಂದ ಐದು ಲಕ್ಷ ರು. ಲಂಚ ಕೇಳಿ ತನಗೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಪ್ರಧಾನಿ ನರೇಂದ್ರ ಮೋದಿಗೆ ಟ್ವೀಟ್ ಮಾಡಿದ್ದ ನಟ ಕಪಿಲ್‌ ಶರ್ಮಾ ಅವರು ಈಗ ಸಂಕಷ್ಟಕ್ಕೆ ಸಿಲುಕಿದ್ದಾರೆ.
ನಟ ಕಪಿಲ್ ಶರ್ಮಾ ಅವರ ವಿರುದ್ಧ ಪರಿಸರ ಕಾಯ್ದೆ ಉಲ್ಲಂಘಿಸಿ ತಮ್ಮ ಮನೆಯ ಹಿಂದೆ ಅವಶೇಷಗಳನ್ನು ಹಾಕಿದೆ ಆರೋಪದ ಮೇಲೆ ವೆರ್ಸೊವ ಪೊಲೀಸರು ಸೋಮವಾರ ಎಫ್ಐಆರ್ ದಾಖಲಿಸಿದ್ದಾರೆ. ಅಲ್ಲದೆ ಅಕ್ರಮವಾಗಿ ಕಟ್ಟಣ ನಿರ್ಮಿಸುತ್ತಿರುವ ಆರೋಪ ಎದುರಿಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಪಿಲ್ ಶರ್ಮಾ ಅವರು ಮ್ಯಾಂಗ್ರೋವ್ ನಲ್ಲಿ ಪರಿಸರ ಕಾಯ್ದೆ ಉಲ್ಲಂಘಿಸಿ ಅವಶೇಷಗಳನ್ನು ಡಂಪ್ ಮಾಡಿರುವ ಬಗ್ಗೆ ಸಮೀಕ್ಷೆ ಮಾಡುವಂತೆ ಮುಂಬೈ ಉಪನಗರ ಜಿಲ್ಲಾಧಿಕಾರಿ ದೀಪೇಂದ್ರ ಸಿಂಗ್ ಖುಸ್ವಾ ಅವರು ಆದೇಶಿಸಿದ್ದರು. ಸಮೀಕ್ಷೆಯ ನಂತರ ಅಂದೇರಿ ತಲಾಟಿ ಹ್ಯಾಸ್ಯ ನಟನ ವಿರುದ್ಧ ದೂರು ದಾಖಲಿಸಿದ್ದಾರೆ.
ಪರಿಸರ ಕಾಯ್ದೆಯಡಿ ಕಪಿಲ್ ಶರ್ಮಾ ವಿರುದ್ಧ ನಾವು ಎಫ್ಐಆರ್ ದಾಖಲಿಸಿದ್ದೇವೆ ಎಂದು ಮುಂಬೈ ಪೊಲೀಸ್ ವಕ್ತಾರ ಡಿಸಿಪಿ ಅಶೋಕ್ ದುಧೆ ಅವರು ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.
ಪ್ರಧಾನಿಗೆ ಸರಣಿಗೆ ಟ್ವೀಟ್‌ ಮಾಡಿದ್ದ ಕಪಿಲ್ ಶರ್ಮಾ, 'ನಾವು ಕಳೆದ 5 ವರ್ಷಗಳಲ್ಲಿ ಸುಮಾರು 15 ಕೋಟಿ ರುಪಾಯಿ ಆದಾಯ ತೆರಿಗೆ ಪಾವತಿಸುತ್ತಿದ್ದೇವೆ. ಆದ್ರೂ ನನ್ನ ಆಫೀಸ್‌ನ್ನು ಸುಗಮವಾಗಿ ನಡೆಸಲು 5 ಲಕ್ಷ ರುಪಾಯಿ ಲಂಚ ಕೇಳುತ್ತಿದ್ದಾರೆ. 'ಇದೇನಾ ಅಚ್ಛೇ ದಿನ್' ಪ್ರಶ್ನಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಸ್ಪಾದಲ್ಲಿ ಅಕ್ರಮ ಚಟುವಟಿಕೆ' ಎಂದು ಆರೋಪಿಸಿ ದಾಂಧಲೆ; 5 ಲಕ್ಷ ರೂ ಗೆ ಬೇಡಿಕೆ, 1 ಲಕ್ಷ ವಸೂಲಿ! ಶಾಕಿಂಗ್ ಘಟನೆ

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್