ಉಗ್ರರಿಗೆ ಬುಲೆಟ್ ಮತ್ತು ಗ್ರೆನೇಡ್ ಗಳಿಂದ ಉತ್ತರಿಸುವ ಸಮಯ ಬಂದಿದೆ: ಮೋದಿಗೆ ಬಾಕ್ಸರ್ ಮನವಿ
ಜಮ್ಮು ಮತ್ತು ಕಾಶ್ಮೀರದ ಉರಿ ಸೆಕ್ಟರ್ ನಲ್ಲಿ ಭಾನುವಾರ ಮುಂಜಾನೆ ನಡೆದ ಭೀಕರ ಉಗ್ರ ದಾಳಿಯಲ್ಲಿ ಹುತಾತ್ಮರಾದ ಯೋಧರ ಸಂಖ್ಯೆ 20ಕ್ಕೇರಿದೆ. ಈ ಸಂಬಂಧ ಇಡೀ
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಉರಿ ಸೆಕ್ಟರ್ ನಲ್ಲಿ ಭಾನುವಾರ ಮುಂಜಾನೆ ನಡೆದ ಭೀಕರ ಉಗ್ರ ದಾಳಿಯಲ್ಲಿ ಹುತಾತ್ಮರಾದ ಯೋಧರ ಸಂಖ್ಯೆ 20ಕ್ಕೇರಿದೆ. ಈ ಸಂಬಂಧ ಇಡೀ ದೇಶವೇ ಆಕ್ರೋಶ ವ್ಯಕ್ತ ಪಡಿಸುತ್ತಿದೆ.
ಭಾರತೀಯ ಸೈನಿಕರ ಮೇಲೆ ಉಗ್ರರು ನಡೆಸಿರುವ ದಾಳಿ ಸಂಬಂಧ ಪ್ರತಿಕ್ರೆಯೆ ನೀಡಿರುವ ಬಾಕ್ಸರ್ ಮನೋಜ್ ಕುಮಾರ್, ಪಾಕಿಸ್ತಾನಕ್ಕೆ ಬುಲೆಟ್ಸ್ ಮತ್ತು ಗ್ರೆನೇಡ್ ಗಳಿಂದ ಉತ್ತರಿಸುವ ಕಾಲ ಬಂದಿದೆ. ಪ್ರಧಾನಿ ಮೋದಿ ಅವರು ಈ ಸಂದರ್ಭದಲ್ಲಿ ಕಠಿಣ ನಿಲುವು ತೆಗೆದು ಕೊಳ್ಳಬೇಕು ಎಂದು ಅವರು ಮನವಿ ಮಾಡಿದ್ದಾರೆ.
ಉಗ್ರರಿಗೆ ಪ್ರೀತಿಯ ಭಾಷೆ ಅರ್ಥವಾಗುವುದಿಲ್ಲ, ಹೀಗಾಗಿ ಇಂಥ ಘಟನೆಗಳು ಯಾವಾಗಲೂ ನಡೆಯುತ್ತಿರುತ್ತವೆ ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.