ಪ್ರಧಾನಿ ನೇತೃತ್ವದಲ್ಲಿ ಸಭೆ 
ದೇಶ

ಉರಿಯಲ್ಲಿ ಉಗ್ರ ದಾಳಿ, ಪಾಕ್ ವಿರುದ್ಧ ಕಠಿಣ ಕ್ರಮಕ್ಕೆ ಪ್ರಧಾನಿ ನಿರ್ಧಾರ

ಜಮ್ಮು ಮತ್ತು ಕಾಶ್ಮೀರದ ಉರಿ ಸೆಕ್ಟರ್ ನಲ್ಲಿ ನಡೆದ ಉಗ್ರರ ದಾಳಿ ಸಂಬಂಧ ಪಾಕಿಸ್ತಾನದ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ಭಾರತ ನಿರ್ಧರಿಸಿದೆ.

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಉರಿ ಸೆಕ್ಟರ್ ನಲ್ಲಿ ನಡೆದ ಉಗ್ರರ ದಾಳಿ ಸಂಬಂಧ ಪಾಕಿಸ್ತಾನದ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ಭಾರತ ನಿರ್ಧರಿಸಿದೆ.
ಈ ಸಂಬಂಧ ಇಂದು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆದ ಉನ್ನತಮಟ್ಟದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ವಿಶ್ವಸಂಸ್ಥೆ ಸೇರಿದಂತೆ ಪ್ರತಿ ಅಂತರಾಷ್ಟ್ರೀಯ ವೇದಿಕೆಗಳಲ್ಲೂ ರಾಜತಾಂತ್ರಿಕವಾಗಿ ಪಾಕ್ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳವುವಂತೆ ಒತ್ತಾಯಿಸಲು ನಿರ್ಧರಿಸಲಾಗಿದೆ.
18 ಯೋಧರ ಸಾವಿಗೆ ಕಾರಣವಾದ ಉರಿ ಉಗ್ರ ದಾಳಿಗೆ ಸಂಬಂಧಿಸಿದಂತೆ ಪಾಕ್ ವಿರುದ್ಧ ನಿರ್ಣಾಯಕ ಕ್ರಮ ತೆಗೆದುಕೊಳ್ಳಬಹುದಾದಂತಹ ಸಾಕ್ಷ್ಯಗಳನ್ನು ಅಂತರಾಷ್ಟ್ರೀಯ ವೇದಿಕೆಗಳಿಗೆ ಒದಗಿಸಲು ಸಭೆ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.
ಸಭೆಯಲ್ಲಿ ಗೃಹ ಸಚಿವ ರಾಜನಾಥ್‌ ಸಿಂಗ್‌, ರಕ್ಷಣಾ ಸಚಿವ ಮನೋಹರ್‌ ಪರಿಕ್ಕರ್‌, ಹಣಕಾಸು ಸಚಿವ ಅರುಣ್‌ ಜೇಟ್ಲಿ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೊಬಾಲ್‌, ಭೂಸೇನಾ ಮುಖ್ಯಸ್ಥ ಜನರಲ್‌ ದಲ್ಬೀರ್‌ ಸಿಂಗ್‌ ಸುಹಾಗ್‌ ಹಾಗೂ ಕೆಲ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
ಇನ್ನು ಪಾಕಿಸ್ತಾನದ ಉಗ್ರರು ಭಾರತದ ಮೇಲೆ ದಾಳಿ ನಡೆಸಿರುವ ಹಿನ್ನೆಲೆಯಲ್ಲಿ ವರ್ಷಾಂತ್ಯಕ್ಕೆ ಪಾಕಿಸ್ತಾನದಲ್ಲಿ ನಡೆಯಲಿರುವ ಸಾರ್ಕ್ ಸಮ್ಮೇಳನದಲ್ಲಿ ಭಾಗಿಯಾಗುವ ಬಗ್ಗೆ ಪ್ರಧಾನಿ ಮೋದಿ ಇನ್ನು ಯಾವುದೇ ನಿರ್ಧಾರ ಕೈಗೊಂಡಿಲ್ಲ. ಅಲ್ಲದೆ ವಿಶ್ವ ಸಂಸ್ಥೆಯ 71 ನೇ ಮಹಾಸಭೆಯಲ್ಲಿ ಭಾಗವಹಿಸುತ್ತಿರುವ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ಉರಿ ಸೆಕ್ಟರ್ ನಲ್ಲಿ ಪಾಕಿಸ್ತಾದ ಭಯೋತ್ಪಾದಕರು ನಡೆಸಿರುವ ದಾಳಿಯನ್ನು ವಿಶ್ವ ಸಂಸ್ಥೆಯಲ್ಲಿ ಪ್ರಸ್ತಾಪಿಸಲಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಲ್ಲಿ 800 ಕೋಟಿ ರೂ. ಲೂಟಿ; ಸಂತೋಷ್ ಲಾಡ್ ರಾಜೀನಾಮೆಗೆ ಆರಗ ಜ್ಞಾನೇಂದ್ರ ಆಗ್ರಹ