ಸಂಗ್ರಹ ಚಿತ್ರ 
ದೇಶ

ಉರಿ ಸೆಕ್ಟರ್ ದಾಳಿ: ಶ್ರೀನಗರಕ್ಕೆ ಭೇಟಿ ನೀಡಲಿರುವ ಎನ್ಐಎ ತಂಡ

ಉರಿ ಸೆಕ್ಟರ್ ನ ಸೇನಾ ಪ್ರಧಾನ ಕಚೇರಿ ಮೇಲೆ ಉಗ್ರರು ನಡೆಸಿದ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂದೆ ರಾಷ್ಟ್ರೀಯ ತನಿಖಾ ತಂಡ ಸೋಮವಾರ ಶ್ರೀನಗರಕ್ಕೆ...

ನವದೆಹಲಿ: ಉರಿ ಸೆಕ್ಟರ್ ನ ಸೇನಾ ಪ್ರಧಾನ ಕಚೇರಿ ಮೇಲೆ ಉಗ್ರರು ನಡೆಸಿದ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂದೆ ರಾಷ್ಟ್ರೀಯ ತನಿಖಾ ತಂಡ ಸೋಮವಾರ ಶ್ರೀನಗರಕ್ಕೆ ಭೇಟಿ ನೀಡಲಿದೆ.

ನಿನ್ನೆಯಷ್ಟೇ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದರು. ಉಗ್ರರ ಅಟ್ಟಹಾಸಕ್ಕೆ ಅಂತ್ಯ ಹಾಡಿದ್ದ ಭಾರತೀಯ ಸೇನಾ ದಿಟ್ಟ ಉತ್ತರ ನೀಡುವ ಮೂಲಕ ದಾಳಿ ಮಾಡಿದ್ದ ನಾಲ್ವರೂ ಉಗ್ರರನ್ನು ಸದೆಬಡಿದಿದ್ದರು. ದಾಳಿ ವೇಳೆ 17 ಯೋಧರು ಹುತಾತ್ಮರಾಗಿದ್ದರು.

ಇದರಂತೆ ದಾಳಿ ಸಂಬಂಧ ತನಿಖೆ ನಡೆಸಲು ರಾಷ್ಟ್ರೀಯ ತನಿಖಾ ತಂಡ ಶ್ರೀನಗರಕ್ಕೆ ಭೇಟಿ ನೀಡಲಿದ್ದು, ಮುಂದಿನ ಹೆಜ್ಜೆಗೆ ಗೃಹ ಸಚಿವಾಲಯದ ನಿರ್ದೇಶನಕ್ಕಾಗಿ ಕಾಯಲಾಗುತ್ತಿದೆ ಎಂದು ಎನ್ಐಎ ವಕ್ತಾರ ಹೇಳಿಕೊಂಡಿದ್ದಾರೆ.

ಇನ್ನು ಉಗ್ರರ ದಾಳಿ ಸಂಬಂಧ ಇಂದು ಗೃಹ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ರಾಜಧಾನಿ ದೆಹಲಿಯಲ್ಲಿ ಉನ್ನತ ಮಟ್ಟದ ಸಭೆಯನ್ನು ನಡೆಯುತ್ತಿದ್ದು, ಸಭೆಯಲ್ಲಿ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್,  ಪ್ರಧಾನಿ ಕಚೇರಿಯ ರಾಜ್ಯ ಖಾತೆ ಸಚಿವ ಜಿತೇಂದ್ರ ಸಿಂಗ್‌, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಲೆಫ್ಟಿನೆಂಟ್ ಜನರಲ್ ರಣಬೀರ್ ಸಿಂಗ್ ಮತ್ತು ಇನ್ನಿತರೆ ಅಧಿಕಾರಿಗಳು ಹಾಜರಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಪ್ರೇಮದ ಊರಲಿ’ ಭರ್ಜರಿ ಕಲೆಕ್ಷನ್: ಬಾಕ್ಸ್ ಆಫೀಸ್‌ನಲ್ಲಿ ಬರೋಬ್ಬರಿ 39 ಕೋಟಿ ರೂ. ಗಳಿಕೆ!

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ನವೆಂಬರ್‌ನಲ್ಲಿ ಕರ್ನಾಟಕ ಬಿಜೆಪಿಗೆ ಮೇಜರ್ ಸರ್ಜರಿ: ಬಿವೈ ವಿಜಯೇಂದ್ರ, ಆರ್ ಅಶೋಕಗೆ ಗೇಟ್ ಪಾಸ್?; ಹೊಸ ಮುಖಗಳಿಗೆ ಮಣೆ!