ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಫ್ಘಾನಿಸ್ತಾನ ಅಧ್ಯಕ್ಷ ಅಶ್ರಫ್ ಘನಿ ಕರೆ ಮಾಡಿ ಮಾತನಾಡಿದ್ದು, ಉರಿ ಸೆಕ್ಟರ್ ನಲ್ಲಿ ಸೇನಾ ಕಚೇರಿ ಮೇಲೆ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿದ್ದಾರೆ.
ಭಾರತಕ್ಕೆ ಬೆಂಬಲವಾಗಿ ನಿಲ್ಲುವ ಭಾರವಸೆಯನ್ನಿತ್ತಿರುವ ಅಫ್ಘಾನಿಸ್ತಾನ ಅಧ್ಯಕ್ಷರು, ಭಯೋತ್ಪಾದನೆಯನ್ನು ನಿರ್ಮೂಲನೆ ಮಾಡಲು ಕೈಗೊಳ್ಳುವ ಎಲ್ಲಾ ಕ್ರಮಗಳಲ್ಲಿ ಭಾರತದೊಂದಿಗೆ ನಿಲ್ಲುವುದಾಗಿ ತಿಳಿಸಿದ್ದಾರೆ ಎಂದು ಪ್ರಧಾನಿ ಕಾರ್ಯಾಲಯ ತಿಳಿಸಿದೆ.
ಪಾಕಿಸ್ತಾನದ ಶಸ್ತ್ರಾಧಾರಿತ ಭಯೋತ್ಪಾದಕರು, ಸೆ.18 ರಂದು ಕಾಶ್ಮೀರದ ಉರಿ ಸೆಕ್ಟರ್ ನಲ್ಲಿರುವ ಸೇನಾ ಕಚೇರಿ ಮೇಲೆ ದಾಳಿ ನಡೆಸಿ 18 ಯೋಧರ ಸಾವಿಗೆ ಕಾರಣರಾಗಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕರೆ ಮಾಡಿ ದಾಳಿಯನ್ನು ಖಂಡಿಸಿರುವ ಅಶ್ರಫ್ ಘನಿ ಮೃತ ಯೋಧರ ಕುಟುಂಬಕ್ಕೆ ಸಾಂತ್ವನ ವ್ಯಕ್ತಪಡಿಸಿದ್ದಾರೆ. ಅಫ್ಘಾನಿಸ್ತಾನದ, ಸಾಂತ್ವನ, ಬೆಂಬಲಕ್ಕೆ ಪ್ರಧಾನಿ ನರೇಂದ್ರ ಮೋದಿ ಧನ್ಯವಾದ ತಿಳಿಸಿದ್ದಾರೆ.