ಪ್ರಧಾನಿ ನಿವಾಸ 
ದೇಶ

ಪ್ರಧಾನಿ ವಿಳಾಸ ಬದಲಾವಣೆ, ರೇಸ್ ಕೋರ್ಸ್ ರಸ್ತೆ ಲೋಕ ಕಲ್ಯಾಣ ಮಾರ್ಗ ಎಂದು ಮರುನಾಮಕರಣ

ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸವಿರುವ ಐತಿಹಾಸಿಕ ರೇಸ್ ಕೋರ್ಸ್ ರಸ್ತೆಯ ಹೆಸರನ್ನು ಲೋಕ ಕಲ್ಯಾಣ ಮಾರ್ಗ ಎಂದು...

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸವಿರುವ ಐತಿಹಾಸಿಕ ರೇಸ್ ಕೋರ್ಸ್ ರಸ್ತೆಯ ಹೆಸರನ್ನು ಲೋಕ ಕಲ್ಯಾಣ ಮಾರ್ಗ ಎಂದು ಮರು ನಾಮಕರಣ ಮಾಡಲಾಗಿದೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದಲ್ಲಿ ಇಂದು ನಡೆದ ನವದೆಹಲಿ ಮಹಾನಗರ ಪಾಲಿಕೆ(ಎನ್ ಡಿಎಂಸಿ)ಯ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ರೇಸ್ ಕೋರ್ಸ್ ರಸ್ತೆ ಹೆಸರು ಬದಲಾವಣೆಗೆ ಸಂಬಂಧಿಸಿದಂತೆ ಶೀಘ್ರದಲ್ಲೇ ಅಧಿಸೂಚನೆ ಹೊರಡಿಸುವ ಸಾಧ್ಯತೆ ಇದೆ.
ಎನ್ ಡಿಎಂಸಿ ಸಂಸತ್ ಭವನ ಸಂಕೀರ್ಣವಿರುವ ಗುರುದ್ವಾರ ರಕಬ್ ಗಂಜ್ ಹೆಸರನ್ನು ಸಹ ಬದಲಾವಣೆ ಮಾಡಿ ಗುರು ಗೋಬಿಂದ್ ಸಿಂಕ್ ಚೌರ್ ಎಂದು ಮರು ನಾಮಕರಣ ಮಾಡಲು ನಿರ್ಧರಿಸಿದೆ.
ಎನ್ ಡಿಎಂಸಿ ಮಂಡಳಿಯ ಸದಸ್ಯರಾಗಿರುವ ಬಿಜೆಪಿ ಸಂಸದೆ ಮೀನಾಕ್ಷಿ ಲೇಖಿ ಅವರು ಪ್ರಧಾನಿ ನಿವಾಸವಿರುವ ರೇಸ್ ಕೋರ್ಸ್ ರಸ್ತೆಯನ್ನು ಏಕಾತ್ಮ ಮಾರ್ಗ ಎಂದು ಬದಲಾವಣೆ ಮಾಡುವಂತೆ ಪ್ರಸ್ತಾವನೆ ಸಲ್ಲಿಸಿದ್ದರು. ಆದರೆ ಇದನ್ನು ತಿರಸ್ಕರಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?