ಡಿಎಂಕೆ ವಕ್ತಾರ ಶರವಣನ್ 
ದೇಶ

6,000 ಕ್ಯೂಸೆಕ್ಸ್ ನೀರು ತಮಿಳುನಾಡಿಗೆ ಸಾಕಾಗುವುದಿಲ್ಲ: ಡಿಎಂಕೆ

6,000 ಕ್ಯೂಸೆಕ್ಸ್ ನೀರನ್ನು ಬಿಡುಗಡೆ ಮಾಡುವಂತೆ ಸುಪ್ರೀಂಕೋರ್ಟ್ ಕರ್ನಾಟಕ ರಾಜ್ಯಕ್ಕೆ ಸೂಚಿಸಿದ್ದು, 6 ಸಾವಿರ ಕ್ಯೂಸೆಕ್ಸ್ ನೀರು ತಮಿಳುನಾಡಿಗೆ ಸಾಕಾಗುವುದಿಲ್ಲ ಎಂದು ದ್ರಾವಿಡ ಮುನ್ನೇತ್ರ ಕಳಗಂ...

ಚೆನ್ನೈ: 6,000 ಕ್ಯೂಸೆಕ್ಸ್ ನೀರನ್ನು ಬಿಡುಗಡೆ ಮಾಡುವಂತೆ ಸುಪ್ರೀಂಕೋರ್ಟ್ ಕರ್ನಾಟಕ ರಾಜ್ಯಕ್ಕೆ ಸೂಚಿಸಿದ್ದು, 6 ಸಾವಿರ ಕ್ಯೂಸೆಕ್ಸ್ ನೀರು ತಮಿಳುನಾಡಿಗೆ ಸಾಕಾಗುವುದಿಲ್ಲ ಎಂದು ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಪಕ್ಷ ಹೇಳಿದೆ.

ಕಾವೇರಿ ವಿವಾದ ಕುರಿತಂತೆ ಮಂಗಳವಾರ ಸುಪ್ರೀಂಕೋರ್ಟ್ ನೀಡಿದ್ದ ತೀರ್ಪು ಕುರಿತಂತೆ ಪ್ರತಿಕ್ರಿಯೆ ನೀಡಿರುವ ಡಿಎಂಕೆ ವಕ್ತಾರ ಶರವಣನ್ ಅವರು, 6 ಸಾವಿರ ಕ್ಯೂಸೆಕ್ಸ್ ನೀರನ್ನು ಬಿಡುಗಡೆ ಮಾಡುವಂತೆ ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ಆದರೆ, ನಮಗೆ 6 ಸಾವಿರ ಕ್ಯೂಸೆಕ್ಸ್ ನೀರು ಸಾಕಾಗುವುದಿಲ್ಲ. ನಾಲ್ಕು ವಾರಗಳೊಳಗಾಗಿ ಕಾವೇರಿ ನಿರ್ವಹಣಾ ಮಂಡಳಿಯನ್ನು ರಚಿಸುವಂತೆ ಕೇಂದ್ರಕ್ಕೆ ಸೂಚನೆ ನೀಡಿರುವುದನ್ನು ನಾವು ಸ್ವಾಗತಿಸುತ್ತೇವೆಂದು ಹೇಳಿದ್ದಾರೆ.

ಕರ್ನಾಟಕ ರಾಜ್ಯದಲ್ಲಿ ವಿಚಿತ್ರವಾದ ರಾಜಕೀಯ ಆಟಗಳು ನಡೆಯುತ್ತಿದ್ದು, ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಆಂತರಿಕ ರಾಜಕೀಯ ನಡೆಯುತ್ತಿದೆ. ಏನೇ ಆದರೂ ಕರ್ನಾಟಕ ರಾಜ್ಯ ಸುಪ್ರೀಂ ಆದೇಶವನ್ನು ಒಪ್ಪಿಕೊಳ್ಳಬೇಕಿದೆ. ಕಾವೇರಿ ವಿವಾದ ಕುರಿತಂತೆ ಕೇಂದ್ರ ಸರ್ಕಾರ ಕೂಡ ಪ್ರವೇಶ ಮಾಡಬೇಕಿದೆ ಮತ್ತು ಸುಪ್ರೀಂ ಆದೇಶದಂತೆ ಶೀಘ್ರದಲ್ಲೇ ಕಾವೇರಿ ನಿರ್ವಹಣಾ ಮಂಡಳಿಯನ್ನು ರಚನೆ ಮಾಡಬೇಕಿದೆ. ಇದರಿಂದ ಬೆಂಗಳೂರಿನಲ್ಲಿ ನಡೆದ ಘಟನೆಯಂತೆ ಮುಂದೆ ನಾವು ಎಂದಿಗೂ ಯಾವುದೇ ಆಸ್ತಿ ಹಾಗೂ ಪ್ರಾಣ ಕಳೆದುಕೊಳ್ಳುವಂತಹ ಪರಿಸ್ಥಿತಿ ಎದುರಾಗದಿರಲು ಸಹಾಯಕವಾಗುತ್ತದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Pak ಬಣ್ಣ ಬಯಲು: ಕಾಶ್ಮೀರ ರಕ್ತದೋಕುಳಿಗೆ 10,000 ಉಗ್ರರ ರವಾನಿಸಿದ್ದ: Hafiz Saeed ಪಾಪಕೃತ್ಯ ಬಹಿರಂಗಪಡಿಸಿದ ಮೌಲ್ವಿ, Video ವೈರಲ್

ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆ: ನಕಲಿ ಪಿಂಚಣಿದಾರರಿಗೆ ಸರ್ಕಾರ ಶಾಕ್; 18 ಲಕ್ಷ ಖಾತೆಗಳು ತಾತ್ಕಾಲಿಕ ಸ್ಥಗಿತ, ವಂಚನೆಯಲ್ಲಿ ಬೆಂಗಳೂರೇ ನಂ.1..!

ಕೋಲ್ಕತ್ತಾದ ಹೊಟೇಲ್ ನಲ್ಲಿ ಭೀಕರ ಅಗ್ನಿ ಅವಘಡ: 9 ಮಂದಿ ಸಾವು, 6 ಜನರಿಗೆ ಗಾಯ-Video

ಕ್ಷಿಪಣಿ ದಾಳಿ ಆರೋಪ: Iranಗೆ UAE ಶಾಕ್, ಎಲ್ಲಾ ವ್ಯಾಪಾರ-ವಾಣಿಜ್ಯ ವಹಿವಾಟು ಸಂಪೂರ್ಣ ಸ್ಥಗಿತ..!

ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್'ಗೆ VIP ಟ್ರೀಟ್‌ಮೆಂಟ್?: ಕಾನೂನಿನ ಮುಂದೆ ಎಲ್ಲರೂ ಒಂದೇ, ಜೈಲಿನಲ್ಲಿ ಯಾರಿಗೂ ವಿಶೇಷ ಸೌಲಭ್ಯವಿಲ್ಲ; ಸರ್ಕಾರ ಸ್ಪಷ್ಟನೆ