ಮಾಜಿ ಸಚಿವ, ಆಪ್ ಶಾಸಕ ಸೋಮನಾಥ್ ಭಾರ್ತಿ ಬಂಧನ
ದೆಹಲಿ ಮಾಜಿ ಸಚಿವ ಹಾಗೂ ಹಾಲಿ ಆಪ್ ಶಾಸಕ ಸೋಮನಾಥ್ ಭಾರ್ತಿ ಅವರನ್ನು ದೆಹಲಿ ಪೊಲೀಸರು ಗುರುವಾರ ಬೆಳಗ್ಗೆ ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
ನವದೆಹಲಿ: ದೆಹಲಿ ಮಾಜಿ ಸಚಿವ ಹಾಗೂ ಹಾಲಿ ಆಪ್ ಶಾಸಕ ಸೋಮನಾಥ್ ಭಾರ್ತಿ ಅವರನ್ನು ದೆಹಲಿ ಪೊಲೀಸರು ಗುರುವಾರ ಬೆಳಗ್ಗೆ ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
ಕಳೆದ ತಿಂಗಳು ದೆಹಲಿ ಏಮ್ಸ್ ಕಾಲೇಜು ಆವರಣದಲ್ಲಿ ನಡೆದ ಪ್ರತಿಭಟನೆ ವೇಳೆ ಸೋಮನಾಥ್ ಭಾರ್ತಿ ಮತ್ತು ಅವರ ಸಂಗಡಿಗರು ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದರು ಎಂಬ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಇದೇ ಗಲಾಟೆ ಸಂಬಂಧ 3 ವಾರಗಳ ಹಿಂದೆಯೇ ಸೋಮನಾಥ್ ಭಾರ್ತಿ ವಿರುದ್ಧ ದೆಹಲಿಯ ಹೌಜ್ ಖಾಸ್ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ಕೂಡ ದಾಖಲಾಗಿತ್ತು.
ಇಂದು ಸೋಮನಾಥ್ ಭಾರ್ತಿ ಅವರನ್ನು ಹೌಜ್ ಖಾಸ್ ಠಾಣಾ ಪೊಲೀಸರು ಬಂಧಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.