ಸಂಗ್ರಹ ಚಿತ್ರ 
ದೇಶ

ಪಾಕ್ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿ ದಾಳಿ ಮಾಡಿಲ್ಲ: ಭಾರತೀಯ ಸೇನೆ ಸ್ಪಷ್ಟನೆ

ಉರಿ ಉಗ್ರ ದಾಳಿ ಬೆನ್ನಲ್ಲೇ ಭಾರತೀಯ ಸೇನೆಯ ಎರಡು ತುಕಡಿಗಳು ಪಾಕ್ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿ ದಾಳಿ ಮಾಡಿವೆ ಎಂಬ ವೈಬ್ ಸೈಟ್ ಸುದ್ದಿ ಸತ್ಯವಲ್ಲ ಎಂದು ಭಾರತೀಯ ಸೇನೆ ಗುರುವಾರ ಸ್ಪಷ್ಟಪಡಿಸಿದೆ.

ನವದೆಹಲಿ: ಉರಿ ಉಗ್ರ ದಾಳಿ ಬೆನ್ನಲ್ಲೇ ಭಾರತೀಯ ಸೇನೆಯ ಎರಡು ತುಕಡಿಗಳು ಪಾಕ್ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿ ದಾಳಿ ಮಾಡಿವೆ ಎಂಬ ವೈಬ್ ಸೈಟ್ ಸುದ್ದಿ ಸತ್ಯವಲ್ಲ ಎಂದು  ಭಾರತೀಯ ಸೇನೆ ಗುರುವಾರ ಸ್ಪಷ್ಟಪಡಿಸಿದೆ.

ಖಾಸಗಿ ನ್ಯೂಸ್ ವೆಬ್ ಸೈಟ್ ವೊಂದರ ವರದಿಯಲ್ಲಿರುವಂತೆ ಸೇನೆಯಿಂದ ಯಾವುದೇ ದಾಳಿಗಳು ನಡೆದಿಲ್ಲ. ಪಾಕ್ ಆಕ್ರಮಿತ ಕಾಶ್ಮೀರಕ್ಕೆ ಯಾವುದೇ ಭಾರತೀಯ ಸೈನಿಕರು ಹೋಗಿಲ್ಲ ಎಂದು  ಭಾರತೀಯ ಸೇನೆ ಹೇಳಿದೆ. ಉರಿ ಉಗ್ರ ದಾಳಿ ಕುರಿತಂತೆ ಪಾಕಿಸ್ತಾನ ಹಾಗೂ ಭಾರತ ನಡುವಿನ ಸಂಬಂಧ ಹದಗೆಟ್ಟಿರುವುದು ನಿಜ. ಆದರೆ ಪಾಕಿಸ್ತಾನದ ವಿರುದ್ಧವಾಗಲಿ ಅಥವಾ ಪಾಕ್  ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರ ನೆಲೆಗಳ ಮೇಲೆ ದಾಳಿ ಮಾಡುವ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಈ ಹಿಂದೆ ಖಾಸಗಿ ವೆಬ್ ಸೈಟ್ ವೊಂದು ಉರಿ ಉಗ್ರ ದಾಳಿ ಬಳಿಕ ಭಾರತೀಯ ಸೇನೆಯ 2 ತುಕಡಿಗಳು ಪಾಕ್ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿ ವಿಶೇಷ ಕಾರ್ಯಾಚರಣೆ ನಡೆಸಿತ್ತು. ಈ ವೇಳೆ 20  ಉಗ್ರರು ಹತರಾಗಿ 200ಕ್ಕೂ ಹೆಚ್ಚು ಮಂದಿ ಉಗ್ರರು ಗಾಯಗೊಂಡಿದ್ದರು ಎಂದು ವರದಿ ಮಾಡಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ಹಾಸನದಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ವೃದ್ಧೆಯ ಶವ ಪತ್ತೆ: ಕೊಲೆ ಶಂಕೆ

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video