ಸಂಗ್ರಹ ಚಿತ್ರ 
ದೇಶ

ಉರಿ ದಾಳಿ ವಿರುದ್ಧ ತಿರುಗಿ ಬಿದ್ದ ಭಾರತೀಯ ಸೇನೆ: ಪಾಕ್ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿ 20 ಉಗ್ರರ ಹತ್ಯೆ?

ಉರಿ ಉಗ್ರ ದಾಳಿ ಬೆನ್ನಲ್ಲೇ ಭಾರತೀಯ ಸೇನೆ ಪಾಕಿಸ್ತಾನದ ವಿರುದ್ಧ ತಿರುಗಿಬಿದ್ದಿದ್ದು, ಪಾಕ್ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿವೆ ಎಂದು ಹೇಳಲಾಗುತ್ತಿದೆ.

ನವದೆಹಲಿ: ಉರಿ ಉಗ್ರ ದಾಳಿ ಬೆನ್ನಲ್ಲೇ ಭಾರತೀಯ ಸೇನೆ ಪಾಕಿಸ್ತಾನದ ವಿರುದ್ಧ ತಿರುಗಿಬಿದ್ದಿದ್ದು, ಪಾಕ್ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿವೆ ಎಂದು  ಹೇಳಲಾಗುತ್ತಿದೆ.

ಈ ಬಗ್ಗೆ ಖಾಸಗಿ ಸುದ್ದಿಮಾಧ್ಯಮವೊಂದು ವರದಿ ಮಾಡಿದ್ದು, ಜಮ್ಮು-ಕಾಶ್ಮೀರದ ಉರಿಯಲ್ಲಿ ಸೇನಾ ನೆಲೆ ಮೇಲೆ ನಡೆದ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನಾಪಡೆಗಳು ಗಡಿ  ದಾಟಿ ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ 3 ಉಗ್ರ ನೆಲೆಗಳ ಮೇಲೆ ದಾಳಿ ನಡೆಸಿವೆ ಎಂದು ಹೇಳಿದೆ. ಸೇನೆಯ ಎರಡು ತುಕಡಿಗಳ ಸುಮಾರು 18 ರಿಂದ 20 ಯೋಧರ ತಂಡ ಈ ದಾಳಿ ನಡೆಸಿದ್ದು,  ದಾಳಿ ವೇಳೆ ಉಗ್ರರ ಮೂರು ನೆಲಗಳನ್ನು ನಾಶಪಡಿಸಿವೆ ಎಂದು ತಿಳಿದುಬಂದಿದೆ.

ಈ ವಿಶೇಷ ಕಾರ್ಯಾಚರಣೆಯಲ್ಲಿ ಸುಮಾರು 20 ಉಗ್ರರನ್ನು ಹೊಡೆದುರುಳಿಸಲಾಗಿದ್ದು, ಸುಮಾರು 200ಕ್ಕೂ ಹೆಚ್ಚು ಉಗ್ರರು ಗಾಯಗೊಂಡಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಈ ವಿಶೇಷ ಕಾರ್ಯಾಚರಣೆಯಲ್ಲಿ ಸೇನಾ ಹೆಲಿಕಾಪ್ಟರ್ ಗಳನ್ನು ಬಳಕೆ ಮಾಡಿಕೊಳ್ಳಲಾಗಿದ್ದು, ಸ್ವತಃ ಸೇನಾ ಮೂಲಗಳೇ ದಾಳಿಯನ್ನು ಖಚಿತಪಡಿಸಿವೆ ಎಂದು ವೆಬ್ ಸೈಟ್ ವರದಿ ಮಾಡಿದ್ದು,  ಈ ದಾಳಿಯಿಂದಾಗಿಯೇ ಪಾಕಿಸ್ತಾನ ಈ ಭಾಗದಲ್ಲಿ ವಿಮಾನ ಹಾರಾಟ ರದ್ದುಗೊಳಿಸಿರುವುದಾಗಿ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಆದರೆ ಈ ವರದಿ ಬಗ್ಗೆ ಭಾರತೀಯ ಸೇನೆಯಿಂದ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಸ್ಪಾದಲ್ಲಿ ಅಕ್ರಮ ಚಟುವಟಿಕೆ' ಎಂದು ಆರೋಪಿಸಿ ದಾಂಧಲೆ; 5 ಲಕ್ಷ ರೂ ಗೆ ಬೇಡಿಕೆ, 1 ಲಕ್ಷ ವಸೂಲಿ! ಶಾಕಿಂಗ್ ಘಟನೆ

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!