ಆಂಧ್ರ ಪ್ರದೇಶದಲ್ಲಿ ಪ್ರವಾಹ (ಸಂಗ್ರಹ ಚಿತ್ರ) 
ದೇಶ

ಭಾರಿ ಮಳೆ: ಆಂಧ್ರ ಪ್ರದೇಶದಲ್ಲಿ ಪ್ರವಾಹಕ್ಕೆ 8 ಬಲಿ

ಕಳೆದ 3 ದಿನಗಳಿಂದ ಸುರಿದ ಸತತ ಮಳೆಯಿಂದಾಗಿ ಆಂಧ್ರ ಪ್ರದೇಶದಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದ್ದು, ವಿವಿಧ ಪ್ರಕರಣಗಳಲ್ಲಿ ಈ ವರೆಗೂ 8 ಮಂದಿ ಬಲಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಅಮರಾವತಿ: ಕಳೆದ 3 ದಿನಗಳಿಂದ ಸುರಿದ ಸತತ ಮಳೆಯಿಂದಾಗಿ ಆಂಧ್ರ ಪ್ರದೇಶದಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದ್ದು, ವಿವಿಧ ಪ್ರಕರಣಗಳಲ್ಲಿ ಈ ವರೆಗೂ 8 ಮಂದಿ ಬಲಿಯಾಗಿದ್ದಾರೆ  ಎಂದು ತಿಳಿದುಬಂದಿದೆ.

ಪ್ರಮುಖವಾಗಿ ಆಂಧ್ರ ಪ್ರದೇಶದ ಗುಂಟೂರು ಜಿಲ್ಲೆ ಭಾರಿ ಮಳೆ ಹಾಗೂ ಪ್ರವಾಹದಿಂದಾಗಿ ತತ್ತರಿಸಿ ಹೋಗಿದ್ದು, 2 ಸಾವಿರಕ್ಕೂ ಅಧಿಕ ಮನೆಗಳು ನೀರಿನಲ್ಲಿ ಮುಳಗಡೆಯಾಗಿವೆ. ಅಂತೆಯೇ 5  ಸಾವಿರಕ್ಕೂ ಅಧಿಕ ಮಂದಿ ನಿರಾಶ್ರಿತರಾಗಿದ್ದು, ಎನ್ ಡಿಆರ್ ಎಫ್ ತಂಡದ ನೆರವಿನ ಮೂಲಕ ಇವರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಕೇವಲ  ಗುಂಟೂರು ಮಾತ್ರವಲ್ಲದೆ ತೆಲಂಗಾಣ ಮತ್ತು ಆಂಧ್ರ ಪ್ರದೇಶ ರಾಜ್ಯಗಳ ಜಂಟಿ ರಾಜಧಾನಿ ಹೈದರಾಬಾದ್ ಕೂಡ ಸತತ ಮಳೆಯಿಂದಾಗಿ ನಲುಗಿ ಹೋಗಿದ್ದು, ಇಲ್ಲಿನ ಶಾಲಾಕಾಲೇಜುಗಳಿಗೆ  ರಜೆ ಘೋಷಣೆ ಮಾಡಲಾಗಿದೆ.

ಇಲ್ಲಿನ ತಗ್ಗು ಪ್ರದೇಶದಲ್ಲಿರು ಶಾಲಾ ಕಾಲೇಜು ಆವರಣದಲ್ಲಿ ಮಂಡಿಯವರೆಗೂ ನೀರು ನಿಂತಿದ್ದು, ಇದೇ ಕಾರಣಕ್ಕೆ ರಜೆ ಘೋಷಣೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಇನ್ನು ಹೈದರಬಾದ್  ಪ್ರಮುಖ ಆಕರ್ಷಣೆಗಳಲ್ಲಿ ಒಂದಾಗಿರುವ ಹುಸೇನ್ ಸಾಗರ್ ನಲ್ಲಿ ನೀರಿನ ಮಟ್ಟ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಸಮೀಪದ ಒಳಚರಂಡಿಗಳೆಲ್ಲವೂ ತುಂಬಿ ರಸ್ತೆ ಮೇಲೆ ಉಕ್ಕಿ  ಹರಿಯುತ್ತಿವೆ. ಅಂತೆಯೇ ಇದೇ ಕೆರ ಸಮೀಪದ ಮೂರು ಪಾರ್ಕ್ ಗಳನ್ನು ಮುಂಜಾಗ್ರತಾ ಕ್ರಮವಾಗಿ ಜಿಹೆಚ್ಎಂಸಿ ಮುಚ್ಚಿದೆ.

ಅಂತೆಯೇ ಮಳೆಯಿಂದಾಗಿ ಸಿಕಿಂದರಾಬಾದ್ ಹಾಗೂ ಗುಂಟೂರು ನಡುವಿನ ರೈಲ್ವೇ ಮಾರ್ಗ ಹಾನಿಗೊಳಗಾಗಿದ್ದು, ಈ ಮಾರ್ಗದಲ್ಲಿ ದುರಸ್ತಿ ಕಾರ್ಯ ನಡೆಯುತ್ತಿದೆ. ಹೀಗಾಗಿ ಇಲ್ಲಿ ಯಾವುದೇ  ರೈಲುಗಳ ಸಂಚರಿಸುತ್ತಿಲ್ಲ. ಈ ಮಾರ್ಗದ ಎಲ್ಲ ರೈಲುಗಳನ್ನು ಬೇರೆ ಮಾರ್ಗಕ್ಕೆ ವರ್ಗಾಯಿಸಲಾಗಿದೆ. ಇನ್ನು ಕ್ರೊಸೂರು ಬಳಿ ಪ್ರವಾಹದ ನೀರಿನಲ್ಲಿ ಸಿಲುಕಿದ್ದ ಎಪಿಎಸ್ ಆರ್ ಟಿಸಿ ಬಸ್ ನಲ್ಲಿದ್ದ  ಸುಮಾರು 35 ಪ್ರಯಾಣಿಕರನ್ನು ಸ್ಥಳೀಯ ಗ್ರಾಮಸ್ಥರು ಹಗ್ಗದ ಸಹಾಯದಿಂದ ರಕ್ಷಿಸಿದ್ದಾರೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT