ಶ್ರೀನಗರ: ಕಾಶ್ಮೀರದದಲ್ಲಿ ಭದ್ರತಾ ಪಡೆಗಳು ಮತ್ತು ಪ್ರತಿಭಟನಾ ನಿರತ ಗುಂಪಿನ ನಡುವೆ ನಡೆದ ಘರ್ಷಣೆಯಲ್ಲಿ ಯುವಕನೊಬ್ಬ ಮೃತಪಟ್ಟಿದ್ದು 30ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.
ಶ್ರೀನಗರದ ಕೆಲವು ಜಿಲ್ಲೆಗಳಲ್ಲಿ ಕರ್ಫ್ಯೂ ವಿಧಿಸಲಾಗಿದ್ದು, ಪ್ರತ್ಯೇಕತಾವಾದಿಗಳು ಪ್ರತಿಭಟನೆಗೆ ಕರೆ ನೀಡಿರುವುದರಿಂದ ಕಣಿವೆ ರಾಜ್ಯದಲ್ಲಿ ನಿಷೇಧ ಹೇರಲಾಗಿದೆ.
ಬರಾಮುಲ್ಲಾ ಜಿಲ್ಲೆಯ ಸೊಪೊರೆ-ಕುಪ್ವಾರ ರಸ್ತೆಯಲ್ಲಿ ಘರ್ಷಣೆ ನಿರತ ಗುಂಪನ್ನು ಚದುರಿಸಲು ಭದ್ರತಾ ಪಡೆಗಳು ಗುಂಡು ಹಾರಿಸಿದಾಗ 22 ವರ್ಷದ ಯುವಕ ವಾಸಿಮ್ ಅಹ್ಮದ್ ಲೋನೆ ಮೃತಪಟ್ಟಿದ್ದಾನೆ.
ಘಟನೆಯಲ್ಲಿ 30 ಮಂದಿಗೆ ಗಾಯವಾಗಿದೆ. ಈ ಮೂಲಕ ಜುಲೈ 8ರಂದು ಹಿಜ್ ಬುಲ್ ಮುಜಾಹಿದ್ದೀನ್ ಹತ್ಯೆ ನಂತರ ಕಣಿವೆ ರಾಜ್ಯದಲ್ಲಿ ಸಾವಿಗೀಡಾದವರ ಸಂಖ್ಯೆ 83ಕ್ಕೇರಿದೆ.