ಜಮ್ಮುವಿನಲ್ಲಿ ಕಂದಕಕ್ಕೆ ಉರುಳಿದ ಬಸ್: 7 ಸಾವು, 9 ಗಾಯ
21 ಜನರನ್ನು ಹೊತ್ತೊಯ್ಯುತ್ತಿದ್ದ ಮಿನಿ ಬಸ್ ವೊಂದು ಕಂದಕಕ್ಕೆ ಉರುಳಿದ್ದು ಪರಿಣಾಮ 7 ಮಂದಿ ಸಾವನ್ನಪ್ಪಿದ್ದು 9 ಜನರಿಗೆ ಗಂಭೀರ ಗಾಯಗಳಾಗಿವೆ.
ಶ್ರೀನಗರ: 21 ಜನರನ್ನು ಹೊತ್ತೊಯ್ಯುತ್ತಿದ್ದ ಮಿನಿ ಬಸ್ ವೊಂದು ಕಂದಕಕ್ಕೆ ಉರುಳಿದ್ದು ಪರಿಣಾಮ 7 ಮಂದಿ ಸಾವನ್ನಪ್ಪಿದ್ದು 9 ಜನರಿಗೆ ಗಂಭೀರ ಗಾಯಗಳಾಗಿವೆ.
ಜಮ್ಮು ಮತ್ತು ಕಾಶ್ಮೀರದ ಟ್ರಾಗ್ ಬಾಲ್ ನ ಗುರೇಜ್-ಬಂಡಿಪೊರ ರಸ್ತೆ ಬಳಿ ಕಳೆದ ರಾತ್ರಿ ಈ ಅವಗಡ ಸಂಭವಿಸಿದ್ದು, ಸ್ಥಳದಲ್ಲೇ ಐದು ಮಂದಿ ಸಾವನ್ನಪ್ಪಿದ್ದು ಇನ್ನಿಬ್ಬರು ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ. ಇನ್ನುಳಿದಂತೆ 9 ಮಂದಿಗೆ ಗಾಯಗಳಾಗಿದ್ದು ಬಂಡಿಪೋರ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಸ್ ನ ಚಾಲಕ ಕಣ್ಮರೆಯಾಗಿದ್ದು ಆತನಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಬಾರ್ಡರ್ ರೋಡ್ಸ್ ಆರ್ಗನೈಜೆಷನ್(ಬಿಆರ್ಒ)ಗೆ ಸೇರಿದ ಬಸ್ ಇದಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.