ಇಶ್ರತ್ ಜಹಾನ್ ಪ್ರಕರಣ (ಸಂಗ್ರಹ ಚಿತ್ರ) 
ದೇಶ

ಇಶ್ರತ್ ಜಹಾನ್ ಪ್ರಕರಣದ ಕಡತ ನಾಪತ್ತೆ: ಗೃಹ ಇಲಾಖೆಯಿಂದ ಎಫ್ ಐಆರ್ ದಾಖಲು

ತೀವ್ರ ಸುದ್ದಿಗೆ ಗ್ರಾಸವಾಗಿದ್ದ ಇಶ್ರತ್ ಜಹಾನ್ ಎನ್ ಕೌಂಟರ್ ಪ್ರಕರಣದ ಕಡತ ನಾಪತ್ತೆ ಪ್ರಕರಣ ಸಂಬಂಧ ಕೇಂದ್ರ ಗೃಹ ಇಲಾಖೆ ಭಾನುವಾರ ಎಫ್ ಐಆರ್ ದಾಖಲು ಮಾಡಿದೆ.

ನವದೆಹಲಿ: ತೀವ್ರ ಸುದ್ದಿಗೆ ಗ್ರಾಸವಾಗಿದ್ದ ಇಶ್ರತ್ ಜಹಾನ್ ಎನ್ ಕೌಂಟರ್ ಪ್ರಕರಣದ ಕಡತ ನಾಪತ್ತೆ ಪ್ರಕರಣ ಸಂಬಂಧ ಕೇಂದ್ರ ಗೃಹ ಇಲಾಖೆ ಭಾನುವಾರ ಎಫ್ ಐಆರ್ ದಾಖಲು ಮಾಡಿದೆ.

ಪ್ರಕರಣ ಸಂಬಂಧ ಇಂದು ದೆಹಲಿ ಪೊಲೀಸರ ಮುಖಾಂತರ ಕೇಂದ್ರ ಗೃಹ ಇಲಾಖೆ ಎಫ್ ಐಆರ್ ದಾಖಲಿಸಿದ್ದು, ಕಡತ ನಾಪತ್ತೆ ಹಿಂದಿನ ಕಾಣದ ಕೈಗಳ ಕುರಿತು ತನಿಖೆ ನಡೆಸುವಂತೆ  ಅಧಿಕೃತವಾಗಿ ಪ್ರಕರಣ ದಾಖಲಿಸಿದೆ. ಈ ಹಿಂದೆ ಇದೇ ಪ್ರಕರಣ ಸಂಬಂಧ ಕೇಂದ್ರ ಸರ್ಕಾರ ಗೃಹ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ಬಿ.ಕೆ.ಪ್ರಸಾದ್ ಅವರ ನೇತೃತ್ವದಲ್ಲಿ ಏಕ ವ್ಯಕ್ತಿ  ತನಿಖಾ ಸಮಿತಿಯನ್ನು ರಚನೆ ಮಾಡಿತ್ತು.

ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳ ನಡುವಿನ ವಾಕ್ಸಮರಕ್ಕೆ ಕಾರಣವಾಗಿದ್ದ ಈ ಹೈ ಪ್ರೊಫೈಲ್ ಕೇಸ್ ನ ಪ್ರಮುಖ ಕಡತಗಳು ಯುಪಿಎ-2 ಆಡಳಿತಾವಧಿಯಲ್ಲಿ ನಾಪತ್ತೆಯಾಗಿದ್ದವು. ಇದೀಗ ಈ  ಸಂಬಂಧ ಕೇಂದ್ರ ಗೃಹ ಇಲಾಖೆ ಎಫ್ ಐಆರ್ ದಾಖಲಿಸಿದೆ. ಈ ಸಂಬಂದ ಸಂಸತ್ ಭವನದ ಪೊಲೀಸರಲ್ಲಿ ದೂರು ದಾಖಲಾಗಿದ್ದು, ಐಪಿಸಿ ಸೆಕ್ಷನ್ 409ರಡಿಯಲ್ಲಿ ಅಧಿಕೃತವಾಗಿ ದೂರು  ದಾಖಲಿಸಿಕೊಂಡಿರುವ ದೆಹಲಿ ಪೊಲೀಸರು ತನಿಖೆ ಆರಂಭಿಸಲಿದ್ದಾರೆ.

ಕಳೆದ ಮಾರ್ಚ್ 10ರಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು,ಇಶ್ರತ್ ಜಹಾನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ಪ್ರಮುಖ ದಾಖಲೆಗಳು ಸಚಿವಾಲಯದಿಂದ ಕಾಣೆಯಾಗಿವೆ  ಎಂದು ಲೋಕಸಭೆಯಲ್ಲಿ ಹೇಳಿದ್ದರು. "ಅಂದಿನ ಗೃಹ ಕಾರ್ಯದರ್ಶಿ 2009ರಲ್ಲಿ ಅಟಾರ್ನಿ ಜನರಲ್ ಅವರಿಗೆ ಬರೆದ ಎರಡು ಪತ್ರಗಳು ಕಾಣೆಯಾಗಿವೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ  ಅಂದಿನ ಅಟಾರ್ನಿ ಜನರಲ್ ಎರಡು ಅಫಿಡವಿಟ್ ಗಳನ್ನು ನಮೂದಿಸಿದ್ದಾರೆ. ಅವುಗಳು ಲಭ್ಯವಿಲ್ಲ" ಎಂದು ಇಶ್ರತ್ ಜಹಾನ್ ನಕಲಿ ಎಂಕೌಂಟರ್ ಪ್ರಕರಣದ ಕುರಿತು ಲೋಕಸಭೆಯಲ್ಲಿ  ಚರ್ಚಿಸುವಾಗ ರಾಜನಾಥ್ ಸಿಂಗ್ ತಿಳಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಯೋತ್ಪಾದಕ ದಾಳಿ ವಿಫಲಗೊಳಿಸಿದ ಭಾರತೀಯ ಪೈಲಟ್‌ಗೆ Israel ಅತ್ಯುನ್ನತ ಗೌರವ: ಸ್ವಾತಂತ್ರ್ಯ ದಿನಾಚರಣೆಗೆ ಪ್ರಧಾನಿ ಮೋದಿ, ಕ್ಯಾಪ್ಟನ್ ಸ್ಮಿತ್‌ಗೆ ಆಹ್ವಾನ..!

5 IAS ಅಧಿಕಾರಿಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ; ಯಾರಿಗೆಲ್ಲಾ ಬದಲಾವಣೆ

ಆಧಾರ ರಹಿತ ಆರೋಪ ಸರಿಯಲ್ಲ, ‘ದಾಖಲೆ ತೋರಿಸಿ, ಜಮೀನನ್ನೇ ನಿಮ್ಮ ಕುಟುಂಬಕ್ಕೆ ಕೊಡ್ತೀನಿ; HDK NICE ಆರೋಪಕ್ಕೆ ಸಚಿವ ಬಾಲಕೃಷ್ಣ ತಿರುಗೇಟು

SIR ಅಕ್ರಮಗಳ ಕುರಿತು ರಾಜ್ಯದಿಂದ ಪ್ರತ್ಯೇಕ ತನಿಖೆ ಇಲ್ಲ: CM ಡಿ.ಕೆ. ಶಿವಕುಮಾರ್ ಸ್ಪಷ್ಟನೆ

ಪಾಕಿಸ್ತಾನದ ಉನ್ನತ ರಾಜತಾಂತ್ರಿಕರಿಗೆ ಭಾರತದ ಸಮನ್ಸ್; ಗಡಿಯಾಚೆಗಿನ ಒಳನುಸುಳುವಿಕೆಯ ವಿರುದ್ಧ ಪ್ರತಿಭಟನೆ