ತಮಿಳು ನಾಡು ಮುಖ್ಯಮಂತ್ರಿ ಜಯಲಲಿತಾ 
ದೇಶ

ತಮಿಳು ನಾಡು ಸಿಎಂ ಜಯಲಲಿತಾ ಆರೋಗ್ಯದಲ್ಲಿ ಚೇತರಿಕೆ: ಪ್ರಕಟಣೆ

ತಮಿಳು ನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬರುತ್ತಿದ್ದು...

ಚೆನ್ನೈ: ತಮಿಳು ನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬರುತ್ತಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ವಿದೇಶಕ್ಕೆ ಹೋಗುವ ಅಗತ್ಯವಿಲ್ಲ ಎಂದು ಅವರ ಕಚೇರಿಯಿಂದ ಮಾಧ್ಯಮ ಪ್ರಕಟಣೆ ಹೊರಬಿದ್ದಿದೆ.
ಜಯಲಲಿತಾ ಅವರ ಆರೋಗ್ಯದಲ್ಲಿ ಇಂದು ಸುಧಾರಣೆ ಕಂಡುಬಂದಿದ್ದು ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ವಿದೇಶಕ್ಕೆ ಕರೆದುಕೊಂಡು ಹೋಗುವುದಿಲ್ಲ. ವಿದೇಶಕ್ಕೆ ಅವರನ್ನು ಕರೆದುಕೊಂಡು ಹೋಗಲಾಗುತ್ತದೆ ಎಂಬ ಸುದ್ದಿ ಆಧಾರರಹಿತ. ಜನತೆ ವದಂತಿಗೆ ಕಿವಿಗೊಡದೆ ಸಂಯಮ ಕಾಪಾಡಿಕೊಳ್ಳಬೇಕೆಂದು ಪ್ರಕಟಣೆಯಲ್ಲಿ ಕೋರಲಾಗಿದೆ.
ಇಲ್ಲಿಯೇ ಆಸ್ಪತ್ರೆಯಲ್ಲಿ ಕೆಲ ದಿನಗಳವರೆಗೆ ಇದ್ದು ಆರೋಗ್ಯ ಸುಧಾರಣೆಯಾದ ನಂತರ ಬಿಡುಗಡೆ ಹೊಂದಲಿದ್ದಾರೆ. ನಂತರ ಎಂದಿನಂತೆ ಅವರು ಕಚೇರಿ ಕೆಲಸ ಕಾರ್ಯಗಳಲ್ಲಿ ತೊಡಗಲಿದ್ದಾರೆ ಎಂದು ಹೇಳಲಾಗಿದೆ.ಕೆಲ ದಿನಗಳವರೆಗೆ ವೈದ್ಯರು ಅವರಿಗೆ ವಿಶ್ರಾಂತಿ ಸೂಚಿಸಿದ್ದಾರೆ.
ಮುಖ್ಯಮಂತ್ರಿ ಜಯಲಲಿತಾ ತೀವ್ರ ಜ್ವರ ಮತ್ತು ಡಿಹೈಡ್ರೇಷನ್ ನಿಂದ ಮೊನ್ನೆ ಗುರುವಾರ ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್