ಜಮ್ಮು-ಕಾಶ್ಮೀರದಲ್ಲಿ ಗ್ರೆನೇಡ್ ದಾಳಿ: 5 ಸಿಆರ್'ಪಿಎಫ್ ಯೋಧರಿಗೆ ಗಾಯ
ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಗ್ರೆನೇಡ್ ದಾಳಿ ನಡೆಸಲಾಗಿದ್ದು, ದಾಳಿಯಲ್ಲಿ 5 ಸಿಆರ್'ಪಿಎಫ್ ಯೋಧರು ಗಾಯಗೊಂಡಿರುವ ಘಟನೆ ಸೋಮವಾರ...
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಗ್ರೆನೇಡ್ ದಾಳಿ ನಡೆಸಲಾಗಿದ್ದು, ದಾಳಿಯಲ್ಲಿ 5 ಸಿಆರ್'ಪಿಎಫ್ ಯೋಧರು ಗಾಯಗೊಂಡಿರುವ ಘಟನೆ ಸೋಮವಾರ ನಡೆದಿದೆ.
ವಾನ್ಪೋಹ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಗ್ರೆನೇಡ್ ದಾಳಿ ನಡೆಸಲಾಗಿದೆ. ಗಾಯಗೊಂಡ ಯೋಧರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಘಟನೆಯಲ್ಲಿ ನಾಗರೀಕರಿಗೆ ಗಾಯಗಳಾಗಿರುವ ಕುರಿತಂತೆ ವರದಿಗಳಾಗಿಲ್ಲ. ದಾಳಿಯ ಹೊಣೆಯನ್ನು ಈ ವರೆಗೂ ಯಾವುದೇ ಉಗ್ರ ಸಂಘಟನೆಗಳು ಹೊತ್ತುಕೊಂಡಿಲ್ಲ.
ಕೆಲ ದಿನಗಳ ಹಿಂದಷ್ಟೇ ಉರಿ ಸೆಕ್ಟರ್ ನ ಸೇನಾ ಪ್ರಧಾನ ಕಚೇರಿ ಮೇಲೆ ಉಗ್ರರ ಗುಂಪೊಂದು ದಾಳಿ ಮಾಡಿತ್ತು. ದಾಳಿಯಲ್ಲಿ 18 ಭಾರತೀಯ ಯೋಧರು ಹುತಾತ್ಮರಾಗಿದ್ದರು. ಅಲ್ಲದೆ. ದಾಳಿ ಮಾಡಿದ ಎಲ್ಲಾ ಉಗ್ರರನ್ನು ಸದೆಬಡಿಯುವಲ್ಲಿ ಯೋಧರು ಯಶಸ್ವಿಯಾಗಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.