ಸಾಂದರ್ಭಿಕ ಚಿತ್ರ 
ದೇಶ

ಛತ್ತೀಸ್ಗಢದಲ್ಲಿ ಐಇಡಿ ಸ್ಫೋಟ: ಓರ್ವ ಡಿಆರ್'ಜಿ ಯೋಧ ಸಾವು, ಇಬ್ಬರಿಗೆ ಗಾಯ

ಛತ್ತೀಸ್ಗಢದ ನಾರಾಯಣಪುರದಲ್ಲಿ ನಕ್ಸಲರು ಸುಧಾರಿತ ಸ್ಫೋಟಕ ಸಾಧನ (ಐಇಡಿ) ಬಳಸಿ ಸ್ಫೋಟಗೊಳಿಸಿದ್ದು, ಪರಿಣಾಮ ಜಿಲ್ಲಾ ಮೀಸಲು ಗುಂಪಿನ (ಡಿಆರ್'ಜಿ) ಯೋಧನೊಬ್ಬ...

ರಾಯ್ಬುರ: ಛತ್ತೀಸ್ಗಢದ ನಾರಾಯಣಪುರದಲ್ಲಿ ನಕ್ಸಲರು ಸುಧಾರಿತ ಸ್ಫೋಟಕ ಸಾಧನ (ಐಇಡಿ) ಬಳಸಿ ಸ್ಫೋಟಗೊಳಿಸಿದ್ದು, ಪರಿಣಾಮ ಜಿಲ್ಲಾ ಮೀಸಲು ಗುಂಪಿನ (ಡಿಆರ್'ಜಿ) ಯೋಧನೊಬ್ಬ ಸಾವನ್ನಪ್ಪಿ ಇಬ್ಬರಿಗೆ ಗಾಯವಾಗಿರುವ ಘಟನೆ ಬುಧವಾರ ನಡೆದಿದೆ.

ಅಕಾಬೆಡಾ ಗ್ರಾಮದ ಅಬುರ್ಮಾದ್ ಪ್ರದೇಶದಲ್ಲಿ ಸಾರ್ವಜನಿಕರಿಗಾಗಿ ಶಿಬಿರವೊಂದನ್ನು ಆರಂಭಿಸಲಾಗಿತ್ತು. ಸಾರ್ವಜನಿಕರು ಆಗಮಿಸುವುದರಿಂದ ಸ್ಥಳದಲ್ಲಿ ಭದ್ರತೆ ನೀಡಲು ಜಿಲ್ಲಾ ಮೀಸಲು ಗುಂಪಿನ (ಡಿಆರ್'ಜಿ) ಯೋಧರನ್ನು ನೇಮಿಸಲಾಗಿತ್ತು.

ಇದರಂತೆ ನಾರಾಯಣಪುರ ಪೊಲೀಸ್ ಠಾಣಾ ವ್ಯಾಪ್ತಿ ಪ್ರದೇಶದ ಬಳಿ ಡಿಆರ್ ಜಿ ಯೋಧರು ಭದ್ರತೆಯನ್ನು ನೀಡುತ್ತಿದ್ದರು. ಈ ವೇಳೆ ನಕ್ಸಲರು ಐಇಡಿ ಸ್ಫೋಟಿಸಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ.

ಘಟನೆ ಬಳಿಕ ಕೆಲ ಗಂಟೆಗಳ ಕಾಲ ಮಾವೋವಾದಿಗಳು ಹಾಗೂ ಭದ್ರತಾ ಸಿಬ್ಬಂದಿಗಳ ನಡುವೆ ಗುಂಡಿನ ಚಕಮಕಿ ನಡೆದಿದೆ. ಮಾವೋವಾದಿಗಳು ಅರಣ್ಯದಲ್ಲಿ ಅಡಗಿಕುಳಿತಿದ್ದು, ಯೋಧರು ಕಾರ್ಯಾಚರಣೆಗಿಳಿದಿದ್ದಾರೆಂದು ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಪ್ರವಾಹದಿಂದ ಬೆಳೆಹಾನಿ: ಪ್ರತಿ ಹೆಕ್ಟೇರ್ ಗೆ ಹೆಚ್ಚುವರಿ 8,500 ರೂ ಪರಿಹಾರ- ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಮಳೆ ಹಾನಿಯಿಂದ 52 ಮಂದಿ ಸಾವು; ವಾರಸುದಾರರಿಗೆ ಪರಿಹಾರ ವಿತರಣೆ: ಸಿಎಂ ಸಿದ್ದರಾಮಯ್ಯ

Gaza peace deal: ಹಮಾಸ್‌ಗೆ ಮೂರ್ನಾಲ್ಕು ದಿನಗಳ ಗಡುವು, ನಕಾರ ಮಾಡಿದ್ರೆ 'ನರಕ'ಕ್ಕೆ ದಾರಿ ತೋರಿಸ್ತಿವಿ! ಟ್ರಂಪ್ ಗುಡುಗು

Rahul Security: ರಾಹುಲ್, ಸೋನಿಯಾ, ಪ್ರಿಯಾಂಕಾ ಜೀವಕ್ಕೆ ಅಪಾಯ; ಭದ್ರತೆ ಹೆಚ್ಚಳಕ್ಕೆ ಕಾಂಗ್ರೆಸ್ ಒತ್ತಾಯ

ನಾನು ಜೋಕರ್ ರೀತಿ ನಿಂತಿದ್ದೆ: ಏಷ್ಯಾಕಪ್ ಟ್ರೋಫಿ ಖಾಸಗಿ ವ್ಯಕ್ತಿಯ ಆಸ್ತಿಯಲ್ಲ; BCCI ಉಪಾಧ್ಯಕ್ಷರ ಪ್ರಶ್ನೆಗೆ ನಖ್ವಿ ತತ್ತರ!

SCROLL FOR NEXT