ಮುಂಬೈ: ವಿವಾದಿತ, ಸ್ವಯಂಘೋಷಿತ ದೇವಮಹಿಳೆ ರಾಧೆ ಮಾ ವಿರುದ್ಧದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಬಾಂಬೆ ಹೈಕೋರ್ಟ್ ಬುಧವಾರ ವಜಾಗೊಳಿಸಿದೆ.
ಸುಖವಿಂದರ್ ಕೌರ್ ಅಲಿಯಾ ರಾಧೆ ಮಾ ದೇವ ಮಹಿಳೆ ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿರುವುದಾಗಿ ಆರೋಪಿಸಿ ಸಲ್ಲಿಸಲಾಗಿದ್ದ ಪಿಐಎಲ್ ವಿಚಾರಣೆ ನಡೆಸಿದ ನ್ಯಾಮೂರ್ತಿ ವಿ.ಎಂ.ಕನಡೆ ಅವರು, ಇದು ವೈಯಕ್ತಿಕ ವಿಚಾರವಾಗಿದ್ದು, ಸಾರ್ವಜನಿಕ ಹಿತಾಸಕ್ತಿ ಆಗುವುದಿಲ್ಲ ಎಂದು ಹೇಳಿದೆ.
ಇದೇ ವೇಳೆ ಅರ್ಜಿದಾರರು ಸ್ವಯಂ ಘೋಷಿತ ದೇವಮಹಿಳೆಯ ವಿರುದ್ಧ ಪೊಲೀಸ್ ಠಾಣೆಯಲ್ಲಿ ಖಾಸಗಿ ದೂರು ದಾಖಲಿಸಿದರೆ, ಕಾನೂನು ಪ್ರಕಾರ ಅವರು ತನಿಖೆ ನಡೆಸಲಿದ್ದಾರೆ ಎಂದು ಕೋರ್ಟ್ ಅಭಿಪ್ರಾಯ ಪಟ್ಟಿದೆ.
ರಾಧೆ ಮಾ ವಿರುದ್ಧ ಈಗಾಗಲೇ ವಂಚನೆ ಮತ್ತು ವರದಕ್ಷಿಣೆ ಕಿರುಕುಳ ಪ್ರಕರಣ ದಾಖಲಾಗಿದ್ದು, ಈ ಸಂಬಂಧ ಆರೋಪಿಗೆ ಬಾಂಬ್ ಹೈಕೋರ್ಟ್ ನಿರೀಕ್ಷಣಾ ಜಾಮೀನು ನೀಡಿದೆ.