ಭಾರತದಲ್ಲಿರುವ ಪಾಕಿಸ್ತಾನ ಹೈಕಮಿಷನರ್ ಅಬ್ದುಲ್ ಬಸಿತ್ 
ದೇಶ

ಕೂಡಲೇ ಭಾರತ ತೊರೆಯಿರಿ: ಪಾಕ್ ಹೈಕಮಿಷನರ್ ಅಬ್ದುಲ್ ಬಸಿತ್ ಗೆ ಬೆದರಿಕೆ ಕರೆ

ಭಾರತ ಮತ್ತು ಪಾಕಿಸ್ತಾನ ಉಭಯ ದೇಶಗಳ ಗಡಿಯಲ್ಲಿ ಉದ್ವಿಘ್ನ ವಾತಾವರಣ ನಿರ್ಮಾಣವಾಗಿರುವ ಬೆನ್ನಲ್ಲೇ ಭಾರತದಲ್ಲಿರುವ ಪಾಕಿಸ್ತಾನ ಹೈಕಮಿಷನರ್ ಅಬ್ದುಲ್ ಬಸಿತ್ ಅವರಿಗೆ...

ನವದೆಹಲಿ; ಭಾರತ ಮತ್ತು ಪಾಕಿಸ್ತಾನ ಉಭಯ ದೇಶಗಳ ಗಡಿಯಲ್ಲಿ ಉದ್ವಿಘ್ನ ವಾತಾವರಣ ನಿರ್ಮಾಣವಾಗಿರುವ ಬೆನ್ನಲ್ಲೇ ಭಾರತದಲ್ಲಿರುವ ಪಾಕಿಸ್ತಾನ ಹೈಕಮಿಷನರ್ ಅಬ್ದುಲ್ ಬಸಿತ್ ಅವರಿಗೆ ಬೆದರಿಕೆ ಕರೆ ಬರುತ್ತಿರುವುದಾಗಿ ಗುರುವಾರ ತಿಳಿದುಬಂದಿದೆ.

ಭಾರತದಲ್ಲಿರುವ ಪಾಕಿಸ್ತಾನ ಹೈಕಮಿಷನರ್ ಅವರಿಗೆ ಅನಾಮಧೇಯ ಬೆದರಿಕೆ ಕರೆಗಳು ಬರುತ್ತಿದ್ದು, ಕೂಡಲೇ ಭಾರತವನ್ನು ಬಿಟ್ಟು ಪಾಕಿಸ್ತಾನಕ್ಕೆ ತೆರಳುವಂತೆ ಬೆದರಿಕೆಯನ್ನು ಒಡ್ಡಲಾಗುತ್ತಿದೆ ಎಂದು ಖಾಸಗಿ ಮಾಧ್ಯಮವೊಂದು ವರದಿ ಮಾಡಿದೆ.

ಪಾಕಿಸ್ತಾನ ಗಡಿಯಲ್ಲಿ ಭಯೋತ್ಪಾದನಾ ಚಟುವಟಿಕೆಗಳು ನಡೆಯುತ್ತಿದ್ದರೂ ಇಷ್ಟೂ ದಿನ ಸಹಿಸಿಕೊಂಡು ಧೃತಿಗೆಡದೆ ತಾಳ್ಮೆಯಿಂದ ವರ್ತಿಸುತ್ತಿದ್ದ ಭಾರತೀಯ ಸೇನೆ ಇದೀಗ ಉಗ್ರರ ವಿರುದ್ಧ ಸಿಡಿದೆದಿದ್ದು, ಗಡಿಯಲ್ಲಿರುವ ಉಗ್ರ ಕ್ಯಾಂಪ್ ಗಳ ಮೇಲೆ ದಾಳಿ ಮಾಡಲು ಆರಂಭಿಸಿವೆ. ಪರಿಣಾಮ ಈ ವರೆಗೂ 39 ಉಗ್ರರನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದೆ ಎಂದು ವರದಿಗಳು ತಿಳಿಸಿವೆ. ಗಡಿಯಲ್ಲಿ ಈಗಲೂ ಬಿಗುವಿನ ವಾತಾವರಣ ಮುಂದುವರೆದಿದ್ದು, ಗುಂಡಿನ ಚಕಮಕಿ ಶಬ್ಧ ಕೇಳಿಬರುತ್ತಿವೆ ಎಂದು ಮೂಲಗಳಿಂದ ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ