ದೇಶ

ರಾಜನಾಥ್ ಸಿಂಗ್ ಸೂಚನೆ ಬೆನ್ನಲ್ಲೇ: ಗಡಿ ಗ್ರಾಮಗಳ ಸ್ಥಳಾಂತರಕ್ಕೆ ಪಂಜಾಬ್ ಸರ್ಕಾರದ ಕ್ರಮ

Srinivas Rao BV

ಚಂಡೀಗಢ: ಉಗ್ರ ಕ್ಯಾಂಪ್ ಗಳ ಮೇಲೆ ಭಾರತೀಯ ಸೇನೆ ದಾಳಿ ಮಾಡಿದ ಬೆನ್ನಲ್ಲೇ ಮುಂಜಾಗೃತಾ ಕ್ರಮವಾಗಿ ಗಡಿ ವ್ಯಾಪ್ತಿಯ ಸುಮಾರು 10 ಕಿ.ಮೀ ಪ್ರದೇಶವನ್ನು ಖಾಲಿ ಮಾಡಿಸುವಂತೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರಿಂದ  ಸೂಚನೆ ಸಿಕ್ಕ ಬೆನ್ನಲ್ಲೇ ಪಂಜಾಬ್ ಸರ್ಕಾರ ಕಾರ್ಯಪ್ರವೃತ್ತವಾಗಿದೆ.
 
ಕೇಂದ್ರ ಗೃಹ ಸಚಿವರ ಸೂಚನೆ ಹಿನ್ನೆಲೆಯಲ್ಲಿ ಗಡಿ ಪ್ರದೇಶದ ಗ್ರಾಮಗಳ ಸ್ಥಳಾಂತರಕ್ಕೆ ಪಂಜಾಬ್ ಸರ್ಕಾರ ಕ್ರಮ ಕೈಗೊಂಡಿದ್ದು, ಸ್ಥಳೀಯ ಅಧಿಕಾರಿಗಳು ಗ್ರಾಮಸ್ಥರಿಗೆ ತಮ್ಮ ಮನೆಗಳನ್ನು ಬಿಟ್ಟು ಸುರಕ್ಷಿತ ಪ್ರದೇಶಗಳಿಗೆ ತೆರಳುವಂತೆ ಧ್ವನಿವರ್ಧಕಗಳ ಮೂಲಕ ಸೂಚನೆ ನೀಡುತ್ತಿದ್ದಾರೆ. ಮುಂಜಾಗೃತಾ ಕ್ರಮವಾಗಿ ಗಡಿ ಭಾಗದ ಜಿಲ್ಲೆಗಳಾದ ಅಮೃತ್ ಸರ, ಗುರ್ದಾಸ್ ಪುರ, ತರ್ನ್, ಫಿರೋಜ್ ಪುರ, ಫರಿದ್ಕೋಟ್ ನ ಭಾಗಗಳಲ್ಲಿ ಶಾಲಾ ಕಾಲೇಜುಗಳನ್ನು ಮುಚ್ಚಿಸಲಾಗಿದೆ. ಗಡಿ ಪ್ರದೇಶಗಳಲ್ಲಿ ಭದ್ರತೆಯನ್ನು ಒದಗಿಸಲು ಬಿಎಸ್ಎಫ್ ಯೋಧರನ್ನು ನಿಯೋಜಿಸಲಾಗಿದೆ.

SCROLL FOR NEXT