ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ (ಸಂಗ್ರಹ ಚಿತ್ರ) 
ದೇಶ

ಗಡಿಯಲ್ಲಿನ 10ಕಿ.ಮೀ ವ್ಯಾಪ್ತಿಯ ಜಾಗ ಖಾಲಿ ಮಾಡಿಸಿ: ಗಡಿರಾಜ್ಯ ಸಿಎಂಗಳಿಗೆ ರಾಜ್ ನಾಥ್ ಸಿಂಗ್ ಸೂಚನೆ

ಗಡಿ ನಿಯಂತ್ರಣ ರೇಖೆಯಲ್ಲಿ ಅಡಗಿದ್ದ ಉಗ್ರ ಕ್ಯಾಂಪ್ ಗಳ ಮೇಲೆ ಭಾರತೀಯ ಸೈನಿಕರು ದಾಳಿ ಮಾಡಿದ ಬೆನ್ನಲ್ಲೇ ಇಂಡೋ-ಪಾಕ್ ಗಡಿ ಉದ್ವಿಗ್ನಗೊಂಡಿದ್ದು, ಗಡಿ ವ್ಯಾಪ್ತಿಯ ಸುಮಾರು 10 ಕಿ.ಮೀ ಪ್ರದೇಶವನ್ನು ಖಾಲಿ ಮಾಡಿಸುವಂತೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ನವದೆಹಲಿ: ಗಡಿ ನಿಯಂತ್ರಣ ರೇಖೆಯಲ್ಲಿ ಅಡಗಿದ್ದ ಉಗ್ರ ಕ್ಯಾಂಪ್ ಗಳ ಮೇಲೆ ಭಾರತೀಯ ಸೈನಿಕರು ದಾಳಿ ಮಾಡಿದ ಬೆನ್ನಲ್ಲೇ ಇಂಡೋ-ಪಾಕ್ ಗಡಿ ಉದ್ವಿಗ್ನಗೊಂಡಿದ್ದು, ಗಡಿ ವ್ಯಾಪ್ತಿಯ  ಸುಮಾರು 10 ಕಿ.ಮೀ ಪ್ರದೇಶವನ್ನು ಖಾಲಿ ಮಾಡಿಸುವಂತೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ಪಂಜಾಬ್, ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ಪಾಕಿಸ್ತಾನದೊಂದಿಗೆ ಗಡಿ ಹಂಚಿಕೊಂಡಿರುವ ರಾಜ್ಯಗಳ ಮುಖ್ಯಮಂತ್ರಿಗಳಿಗೆ ರಾಜನಾಥ್ ಸಿಂಗ್ ಅವರು ಇಂದು ಮಧ್ಯಾಹ್ನ ಕರೆ ಮಾಡಿದ್ದು,  ಮುಂಜಾಗ್ರತಾ ಕ್ರಮವಾಗಿ ಗಡಿಯಿಂದ ಸುಮಾರು 10 ವ್ಯಾಪ್ತಿಯಲ್ಲಿ ಜನರನ್ನು ತೆರವುಗೊಳಿಸುವಂತೆ ಸೂಚನೆ ನೀಡಿದ್ದಾರೆ. ಅಲ್ಲದೆ ಗಡಿಯುದ್ದಕ್ಕೂ ಕಟ್ಟೆಚ್ಚರವಹಿಸುವಂತೆ ಸೇನಾಧಿಕಾರಿಗಳಿಗೆ  ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.

ಇಂಡೋ-ಪಾಕ್ ಗಡಿಗೆ ಹೆಚ್ಚುವರಿ ಸೇನಾಪಡೆಗಳು
ಇದೇ ವೇಳೆ ಉಭಯ ದೇಶಗಳ ಗಡಿಯಲ್ಲಿ ಉದ್ವಿಗ್ನ ವಾತಾವರಣ ನೆಲೆಸಿರುವಂತೆಯೇ ಇಂಡೋ-ಪಾಕ್ ಗಡಿಗೆ ಹೆಚ್ಚುವರಿ ಸೇನಾಪಡೆಗಳನ್ನು ನಿಯೋಜಿಸಲಾಗುತ್ತಿದೆ ಎಂದು ತಿಳಿದುಬಂದಿದೆ.  ಪ್ರಮುಖವಾಗಿ ಪಂಜಾಬ್ ಭಾಗದ ಗಡಿಗಳಲ್ಲಿ ಹೆಚ್ಚುವರಿ ಸೇನಾಪಡೆಗಳನ್ನು ನಿಯೋಜಿಸಲಾಗುತ್ತಿದ್ದು, ನದಿ ಪಾತ್ರದ ಗ್ರಾಮಗಳಲ್ಲಿ ಕಟ್ಟೆಚ್ಚರವಹಿಸುವಂತೆ ಸೂಚನೆ ನೀಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel