ನವದೆಹಲಿ: ಗಡಿ ನಿಯಂತ್ರಣ ರೇಖೆಯನ್ನು ದಾಟಿ ಪಾಕ್ ಆಕ್ರಮಿಕ ಕಾಶ್ಮೀರದಲ್ಲಿನ ಕಾರ್ಯಾಚರಣೆ ವೇಳೆ ಪಾಕಿಸ್ತಾನ ಯೋಧರು ಭಾರತೀಯ ಯೋಧನನ್ನು ಬಂಧಿಸಲಾಗಿದೆ ಎಂಬ ವರದಿಯನ್ನು ತಳ್ಳಿ ಹಾಕಿರುವ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಕಾರ್ಯಾಚರಣೆ ವೇಳೆ ಭಾರತೀಯ ಯೋಧ ಪಾಕ್ ಸೈನಿಕರಿಗೆ ಸೆರೆಸಿಕ್ಕಿಲ್ಲ ಎಂದು ಹೇಳಿದ್ದಾರೆ.
ಈ ಹಿಂದೆ ನಮ್ಮ ಯೋಧನೋರ್ವ ಶಸ್ತ್ರಾಸ್ತ್ರದೊಂದಿಗೆ ಗಡಿ ನಿಯಂತ್ರಣ ರೇಖೆ ದಾಟಿದ್ದು ಆ ವೇಕ್ ಪಾಕ್ ಸೈನಿಕರು ನಮ್ಮ ಯೋಧನನ್ನು ಬಂಧಿಸಿತ್ತು. ಇದೀಗ ಭಾರತೀಯ ಯೋಧರ ಕಾರ್ಯಾಚರಣೆ ವೇಳೆ ಬಂಧಿಸಿರುವುದಾಗಿ ಪಾಕಿಸ್ತಾನ ಸುಳ್ಳು ಹೇಳುತ್ತಿದೆ ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.
ಪಾಕ್ ವಶದಲ್ಲಿರುವ ಭಾರತೀಯ ಯೋಧನನ್ನು ಸುರಕ್ಷಿತವಾಗಿ ಭಾರತಕ್ಕೆ ಕರೆತರುವ ಪ್ರಯತ್ನಗಳು ನಡೆದಿದೆ. ಈ ಸಂಬಂಧ ಪಾಕಿಸ್ತಾನ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ ಎಂದರು.