ಪೊನ್ ರಾಧಾಕೃಷ್ಣನ್ (ಸಂಗ್ರಹ ಚಿತ್ರ) 
ದೇಶ

ಕರ್ನಾಟಕದ ಕಾಂಗ್ರೆಸ್ ಸರ್ಕಾರ ಕಾವೇರಿ ವಿವಾದವನ್ನು ರಾಜಕೀಯ ಮಾಡುತ್ತಿದೆ; ಪೊನ್ ರಾಧಾಕೃಷ್ಣನ್

ಕರ್ನಾಟಕ ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಕಾವೇರಿ ವಿವಾದವನ್ನು ರಾಜಕೀಯ ಮಾಡುತ್ತಿದೆ ಎಂದು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಪೊನ್ ರಾಧಾಕೃಷ್ಣನ್ ಅವರು...

ನಾಗಕೊಯಿಲ್: ಕರ್ನಾಟಕ ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಕಾವೇರಿ ವಿವಾದವನ್ನು ರಾಜಕೀಯ ಮಾಡುತ್ತಿದೆ ಎಂದು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಪೊನ್ ರಾಧಾಕೃಷ್ಣನ್ ಅವರು ಹೇಳಿದ್ದಾರೆ.

ಕಾವೇರಿ ವಿವಾದ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಕಳೆದ ನಾಲ್ಕು ವರ್ಷದಿಂದ ಜನಪ್ರಿಯತೆಯನ್ನು ಕಳೆದುಕೊಂಡಿರುವ ಕರ್ನಾಟಕದ ರಾಜ್ಯ ಕಾಂಗ್ರೆಸ್ ಸರ್ಕಾರ, ಚುನಾವಣೆ ಹತ್ತಿರ ಬರುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ವಿವಾದದಲ್ಲಿ ರಾಜಕೀಯ ಮಾಡುವ ಮೂಲಕ ಜನಪ್ರಿಯತೆಯನ್ನುಗಳಿಸಲು ಯತ್ನಿಸುತ್ತಿದೆ ಎಂದು ರಾಧಾಕೃಷ್ಣನ್ ಅವರು ಆರೋಪಿಸಿದ್ದಾರೆ.

ಸುಪ್ರೀಂಕೋರ್ಟ್ ಆದೇಶಕ್ಕೆ ಅವರು ಗೌರವ ನೀಡುತ್ತಿಲ್ಲ, ಮುಂದಿನ ದಿನಗಳಲ್ಲಿ ಇದರ ಪರಿಣಾಮವನ್ನು ಕರ್ನಾಟಕ ಎದುರಿಸಲಿದೆ ಎಂದು ತಿಳಿಸಿದ್ದಾರೆ.

ಇದೇ ವೇಳೆ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಎಂಬ ವರದಿ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಇದೊಂದು ವದಂತಿಯಾಗಿದ್ದು, ಇಂತಹ ಸುದ್ದಿಗಳನ್ನು ಜನರು ನಂಬಬಾರದು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮತ ಬೇಟೆ ತಡೆಯಲು 'ಕೈ' ಕಲಿಗಳ ಮಾಸ್ಟರ್ ಪ್ಲ್ಯಾನ್: ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ, ಬೂತ್ ಮಟ್ಟದಲ್ಲಿ ಸಮರಕ್ಕೆ ಸಜ್ಜು..!

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!