ಸಾಂದರ್ಭಿಕ ಚಿತ್ರ 
ದೇಶ

ಪಂಜಾಬ್: ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದ ವ್ಯಕ್ತಿ ಬಂಧನ

ಅಕ್ರಮ ಶಸ್ತ್ರಾಸ್ತ್ರಗಳನ್ನು ಹಿಡಿದು ಸಂಶಯಾಸ್ಪದವಾಗಿ ಓಡಾಡುತ್ತಿದ್ದ ವ್ಯಕ್ತಿಯನ್ನು ಪಂಜಾಬ್ ನಲ್ಲಿ ಬಂಧನಕ್ಕೊಳಪಡಿಸಿರುವುದಾಗಿ ಶುಕ್ರವಾರ...

ಫಗ್ವಾರಾ: ಅಕ್ರಮ ಶಸ್ತ್ರಾಸ್ತ್ರಗಳನ್ನು ಹಿಡಿದು ಸಂಶಯಾಸ್ಪದವಾಗಿ ಓಡಾಡುತ್ತಿದ್ದ ವ್ಯಕ್ತಿಯನ್ನು ಪಂಜಾಬ್ ನಲ್ಲಿ ಬಂಧನಕ್ಕೊಳಪಡಿಸಿರುವುದಾಗಿ ಶುಕ್ರವಾರ ತಿಳಿದುಬಂದಿದೆ.

ಸೀಮರಂಗಪಾಲ್ ಸಿಂಗ್ ಅಲಿಯಾಸ್ ರೊಮಿ ಬಂಧಿತ ವ್ಯಕ್ತಿಯಾಗಿದ್ದು, ಈತ ರಾವಲ್ಪಿಂಟಿ ಗ್ರಾಮದ ನಿವಾಸಿಯಾಗಿದ್ದಾನೆಂದು ಮೂಲಗಳಿಂದ ಹೇಳಲಾಗುತ್ತಿದೆ.

ಕಳೆದ ರಾತ್ರಿ ಶಸ್ತ್ರಾಸ್ತ್ರಗಳನ್ನು ಹಿಡಿದು ಸಂಶಯಾಸ್ಪದವಾಗಿ ಓಡಾಡುತ್ತಿದ್ದ ಈತನನ್ನು ಸ್ಥಳದಲ್ಲಿಯೇ ತಿರುಗುತ್ತಿದ್ದ ಗಸ್ತು ಪಡೆ ಗಮನಿಸಿದೆ. ಈ ವೇಳೆ ವಿಚಾರಿಸಿದಾಗ ಆತನ ಬಳಿ ಅಕ್ರಮ ಶಸ್ತ್ರಾಸ್ತ್ರಗಳಿರುವುದು ಕಂಡು ಬಂದಿದೆ. ವ್ಯಕ್ತಿಯ ಬಳಿ 32 ಪಿಸ್ತೂಲುಗಳು ಹಾಗೂ 3 ಜೀವಂತ ಸಿಡಿಮದ್ದುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಫಗ್ವಾರಾದ ಎಸ್'ಪಿ ಜಸ್ಬೀರ್ ಸಿಂಗ್ ರಾಯ್ ಅವರು ಹೇಳಿದ್ದಾರೆ.

ಬಂಧನಕ್ಕೊಳಗಾಗಿರುವ ವ್ಯಕ್ತಿಯ ವಿರುದ್ಧ ಈ ಹಿಂದೆ ಹಲವು ಅಪಹರಣ ಹಾಗೂ ಗಲಭೆ ಪ್ರಕರಣಗಳು ದಾಖಲಾಗಿದ್ದವು ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

SCROLL FOR NEXT