ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ನಿತೀಶ್ ಗೆ ಭಾರಿ ಹಿನ್ನಡೆ, ಪಾಟ್ನಾ ಹೈಕೋರ್ಟ್ ನಿಂದ ಬಿಹಾರದಲ್ಲಿ ಮದ್ಯ ನಿಷೇಧ ಆದೇಶ ರದ್ದು

ಬಿಹಾರ ಸರ್ಕಾರದ ಮದ್ಯ ನಿಷೇಧ ಆದೇಶವನ್ನು ಪಾಟ್ನಾ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದ್ದು, ಕಳೆದ ಏಪ್ರಿಲ್ ನಿಂದ ರಾಜ್ಯದಲ್ಲಿ ಮದ್ಯ ಮಾರಾಟ...

ನಿತೀಶ್ ಕುಮಾರ್
Lingaraj Badiger
Updated On : 30 Sept 2016, 2:34 am
ಪಾಟ್ನಾ: ಬಿಹಾರ ಸರ್ಕಾರದ ಮದ್ಯ ನಿಷೇಧ ಆದೇಶವನ್ನು ಪಾಟ್ನಾ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದ್ದು, ಕಳೆದ ಏಪ್ರಿಲ್ ನಿಂದ ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧಿಸಿದ್ದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಗೆ ಭಾರಿ ಹಿನ್ನಡೆಯಾಗಿದೆ.  
ಮದ್ಯ ಮಾರಾಟ ನಿಷೇಧ ಆದೇಶ ಪ್ರಶ್ನಿಸಿದ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಪೀಠ, ಬಿಹಾರ ಸರ್ಕಾರದ ಕ್ರಮ ಕಾನೂನು ಬಾಹಿರ ಎಂದು ಹೇಳಿದೆ.
ಇದೀಗ ನಿತೀಶ್ ಕುಮಾರ್ ಜಾರಿಗೆ ತಂದ ಹೊಸ ಕಾಯ್ದೆಯನ್ನು ಪಾಟ್ನಾ ಹೈಕೋರ್ಟ್ ರದ್ದು ಮಾಡಿ, ಇದು ಕಾನೂನು ಬಾಹಿರ ಎಂದು ಅಭಿಪ್ರಾಯವ್ಯಕ್ತಪಡಿಸಿದೆ.

Advertisement

Advertisement

ಬಿಹಾರ ಸರ್ಕಾರ ಹೊರಡಿಸಿದ್ದ ಹೊಸ ಮಸೂದೆಗೆ ರಾಜ್ಯಪಾಲರಾದ ರಾಮ್ ನಾಥ್ ಕೋವಿಂದ್ ಅವರು ಸೆಪ್ಟೆಂಬರ್ 7ರಂದು ಅಂಕಿತ ಹಾಕಿದ್ದರು.
ಬಿಹಾರ ರಾಜ್ಯದಲ್ಲಿ ಏಪ್ರಿಲ್ 1ರಿಂದ ಸಂಪೂರ್ಣ ಮದ್ಯ ಮಾರಾಟಕ್ಕೆ ನಿಷೇಧ ವಿಧಿಸಿ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಧಿಕೃತ ಆದೇಶ ಹೊರಡಿಸಿದ್ದರು. ಈ ಹೊಸ ಕಾಯ್ದೆ ಜಾರಿಯಿಂದಾಗಿ ಒಂದು ವೇಳೆ ಮನೆಯಲ್ಲಿ ಅಥವಾ ಯಾವುದೇ ಸ್ಥಳದಲ್ಲಿ ಮದ್ಯ ಪತ್ತೆಯಾದರೆ ಜಾಮೀನು ರಹಿತ ಅಪರಾಧ ಹಾಗೂ ಬಂಧನ ಶಿಕ್ಷೆ ಅನುಭವಿಸಬೇಕಾಗಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments