ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಮತ್ತು ಮಾಜಿ ಮುಖ್ಯಮಂತ್ರಿ ಕರುಣಾನಿಧಿ (ಸಂಗ್ರಹ ಚಿತ್ರ) 
ದೇಶ

ಜಯಲಲಿತಾ ಆರೋಗ್ಯದ ವದಂತಿಗಳಿಗೆ ತೆರೆ ಎಳೆಯಿರಿ: ಕರುಣಾನಿಧಿ ಒತ್ತಾಯ

ಎಐಡಿಎಂಕೆ ವರಿಷ್ಠೆ, ತಮಿಳು ನಾಡು ಮುಖ್ಯಮಂತ್ರಿ ಜಯಲಲಿತಾ ಅವರ ಆರೋಗ್ಯದ ಬಗ್ಗೆ ...

ಚೆನ್ನೈ: ಎಐಡಿಎಂಕೆ ವರಿಷ್ಠೆ, ತಮಿಳು ನಾಡು ಮುಖ್ಯಮಂತ್ರಿ ಜಯಲಲಿತಾ ಅವರ ಆರೋಗ್ಯದ ಬಗ್ಗೆ ಹಬ್ಬುತ್ತಿರುವ ವದಂತಿಗಳಿಗೆ ತೆರೆ ಎಳೆಯುವಂತೆ ಡಿಎಂಕೆ ಅಧ್ಯಕ್ಷ, ಮಾಜಿ ಮುಖ್ಯಮಂತ್ರಿ ಎಂ.ಕರುಣಾನಿಧಿ ಅಲ್ಲಿನ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಜ್ವರದ ಸಮಸ್ಯೆಯಿಂದ ವಾರದ ಹಿಂದೆ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿರುವ ಜಯಲಲಿತಾ ಅವರು ಶೀಘ್ರ ಗುಣಮುಖ ಹೊಂದಲಿ ಎಂದು ಹಾರೈಸಿರುವ ಕರುಣಾನಿಧಿಯವರು ಅವರ ಆರೋಗ್ಯದ ಬಗ್ಗೆ ಜನತೆಗೆ ಸರಿಯಾದ ಮಾಹಿತಿ ನೀಡಲಿ ಎಂದು ಹೇಳಿದ್ದಾರೆ.
''ನಾನು ಜಯಲಲಿತಾ ಅವರ ತತ್ವ, ಅಭಿಪ್ರಾಯಗಳನ್ನು ವಿರೋಧಿಸುತ್ತಿದ್ದರೂ ಅವರು ಶೀಘ್ರವೇ ಗುಣಮುಖರಾಗಿ ಎಂದಿನಂತೆ ಕಚೇರಿ ಕರ್ತವ್ಯಕ್ಕೆ ಹಾಜರಾಗಲಿ ಎಂದು ಆಶಿಸುತ್ತೇನೆ'' ಎಂದು ಹೇಳಿದ್ದಾರೆ.
ಜಯಲಲಿತಾ ಅವರು ಚಿಕಿತ್ಸೆ ಪಡೆಯುತ್ತಿರುವ ಚೆನ್ನೈನ ಅಪೋಲೋ ಆಸ್ಪತ್ರೆ ಅವರ ಆರೋಗ್ಯದ ಬಗ್ಗೆ ಸುದ್ದಿ ನೀಡುತ್ತಿದ್ದರೂ ಕೂಡ ಕೆಲವು ಅನಪೇಕ್ಷಿತ ವದಂತಿಗಳು ಹಬ್ಬುತ್ತಿದ್ದು, ಉದ್ದೇಶಪೂರ್ವಕವಾಗಿ ಕೆಲವರು ಇದನ್ನು ಹಬ್ಬಿಸುತ್ತಿದ್ದಾರೆ ಎಂದರು.
''ಕೆಲವರು ಸಾಮಾಜಿಕ ಮಾಧ್ಯಮಗಳಲ್ಲಿ ಜಯಲಲಿತಾ ಅವರ ಆರೋಗ್ಯದ ಬಗ್ಗೆ ಸುಮ್ಮನೆ ವದಂತಿ ಹರಡುತ್ತಿದ್ದಾರೆ. ಆದುದರಿಂದ ಮುಖ್ಯಮಂತ್ರಿಯವರ ಆರೋಗ್ಯದ ಬಗ್ಗೆ ಸರಿಯಾದ ಮಾಹಿತಿ ಜನತೆಗೆ ಗೊತ್ತಾಗಲು ಸರ್ಕಾರ ವಿಷಯ ತಿಳಿಸಬೇಕು. ಮುಖ್ಯಮಂತ್ರಿಯವರು ಆಸ್ಪತ್ರೆಯಲ್ಲಿರುವ ಭಾವಚಿತ್ರ ಬಿಡುಗಡೆ ಮಾಡಿದರೆ ಒಳ್ಳೆಯದು ಎಂದು ಕರುಣಾನಿಧಿ ಹೇಳಿದ್ದಾರೆ.
ಜಯಲಲಿತಾ ಅವರು ಸೆಪ್ಟೆಂಬರ್ 22ರಂದು ತೀವ್ರ ಜ್ವರ ಮತ್ತು ಡಿ ಹೈಡ್ರೇಷನ್ ಗೆ ಬಾಧೆಗೆ ಒಳಗಾಗಿ ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು. ವೈದ್ಯರು ಅವರಿಗೆ ಕೆಲ ದಿನಗಳವರೆಗೆ ಆಸ್ಪತ್ರೆಯಲ್ಲಿ ವಿಶ್ರಾಂತಿ ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Asian Games 2026: ಇತಿಹಾಸ ಬರೆದ ಮೈಸೂರಿನ ಪ್ರಣವಿ ಅರಸ್; ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳಾ ಗಾಲ್ಫರ್

'ಅಭಿವೃದ್ಧಿಶೀಲ ರಾಷ್ಟ್ರಗಳ ಕೈಕಟ್ಟಬೇಡಿ, ಡಂಪಿಂಗ್ ವಿರುದ್ಧ ಸಾಕ್ಷ್ಯಾಧಾರಿತ ಕ್ರಮ ಕೈಗೊಳ್ಳಿ': G20 ಸಭೆಯಲ್ಲಿ ಭಾರತ ಕೆಂಡ

ಏಷ್ಯನ್ ಗೇಮ್ಸ್ 2026 ಫೈನಲ್: ಅಭಿಷೇಕ್ ಶರ್ಮಾ, ತಿಲಕ್ ವರ್ಮಾ ಭರ್ಜರಿ ಅರ್ಧ ಶತಕ, ಪಾಕ್ ಗೆಲ್ಲಲು 212 ರನ್ ಗಳ ಗುರಿ ನೀಡಿದ ಭಾರತ!

'ಅವನು ಆಡಿದ್ರೂ, ಆಡದಿದ್ದರೂ ಏನೂ ವ್ಯತ್ಯಾಸವಾಗಲ್ಲ’: ಭಾರತದ ಯುವ ಆಟಗಾರನ ಕುರಿತು ಕಡ್ಡಿ ಮುರಿದಂತೆ ಹೇಳಿದ Ajinkya Rahane!

Flydubai ಕಾಕ್‌ಪಿಟ್ ದಾಳಿ: ಸಹ ಪೈಲಟ್ ಗುರುತು ಬಹಿರಂಗ