ರಾಷ್ಟ್ರಪತಿ ಮತ್ತು ಸಿದ್ದರಾಮಯ್ಯ 
ದೇಶ

ಕಾವೇರಿ ವಿವಾದ: ರಾಷ್ಟ್ರಪತಿ ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ

ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರನ್ನು ಭೇಟಿಯಾಗಿ...

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರನ್ನು ಭೇಟಿಯಾಗಿ ಚರ್ಚಿಸಿದರು.

ಇಂದು ಮಧ್ಯಾಹ್ನ 12.30 ರ ವೇಳೆಗೆ ರಾಷ್ಟ್ರಪತಿ ಭವನಕ್ಕೆ ತೆರಳಿದ ಸಿಎಂ ಸಿದ್ದರಾಮಯ್ಯ ಉಭಯ ರಾಜ್ಯಗಳ ನಡುವಿನ ಜಲ ವಿವಾದದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಧ್ಯಸ್ಥಿಕೆ ವಹಿಸಲು ಸೂಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಬಳಿ ಮನವಿ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.
 
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಇಂದು ಸುಪ್ರೀಂಕೋರ್ಟ್‌ನಲ್ಲಿ ಕರ್ನಾಟಕ ಪರ ಅರ್ಜಿ ವಿಚಾರಣೆಯಾಗಲಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮಧ್ಯಸ್ಥಿಕೆಗೆ ಸೂಚನೆ ನೀಡಿ ಎಂದು ರಾಷ್ಟ್ರಪತಿ ಬಳಿ ಮನವಿ ಮಾಡಿದ್ದಾರೆ.

ಇನ್ನೂ ಸುಪ್ರಿಂ ಕೋರ್ಟ್ ನಲ್ಲಿ ಇಂದು ಕಾವೇರಿ ವಿವಾದ ಸಂಬಂಧ ವಿಚಾರಣೆ ಇರುವುದರಿಂದ ಬೆಂಗಳೂರಿನಲ್ಲಿ ನಿಷೇದಾಜ್ಞೆ ಮುಂದುವರಿಸಲಾಗಿದೆ. ಮಂಡ್ಯ, ಮೈಸೂರು ಹಾಗೂ ಕರ್ನಾಟಕ ಮತ್ತು ತಮಿಳುನಾಡು ಗಡಿ ಭಾಗಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ ಕೆ ಶಿವಕುಮಾರ್ ಸ್ಫೋಟಕ ಆರೋಪ; Video

ಶಾಸಕರ ಲೆಟರ್‌ಹೆಡ್'ನಲ್ಲೇ 'ಸತ್ತಿದ್ದಾರೆ' ಎಂದು ಅರ್ಜಿ: ಯತ್ನಾಳ್ ಸೇರಿ ಮೂವರ ವಿರುದ್ಧ FIR ದಾಖಲು

'Evil Dead': ನಟ ನಾನಾ ಪಾಟೇಕರ್ ಸಾವು, #MeToo ಆರೋಪ ಮಾಡಿದ್ದ ನಟಿ ತನುಶ್ರೀ ದತ್ತಾ ಹೇಳಿದ್ದೇನು? ವಿಚಿತ್ರ ಪೋಸ್ಟ್!

ಇದ್ದಕ್ಕಿದ್ದಂತೆ ಬಾಯ್ತೆರೆದ ರಸ್ತೆ, ಕಾರು ಆಪೋಷನ, ಕೂದಲೆಳೆ ಅಂತರದಲ್ಲಿ ಚಾಲಕ ಬಚಾವ್-Video

'SIR' ವಿರುದ್ಧ ಭಾರೀ ಪ್ರತಿಭಟನೆ: ಜ್ಞಾನೇಶ್ ಕುಮಾರ್ Z+ ಭದ್ರತೆ ಮತ್ತಷ್ಟು ಹೆಚ್ಚಿಸಿದ ಕೇಂದ್ರ ಸರ್ಕಾರ!