ನಮ್ಮ ಹುಡುಗರು ಚೆನ್ನಾಗಿ ಆಡಿದರು; ಪಾಕಿಸ್ತಾನ ಕಾಲೆಳೆದ ಸೆಹ್ವಾಗ್
ಪಾಕ್ ನೆಲದಲ್ಲಿ ನಮ್ಮ ಹುಡುಗರು ಚೆನ್ನಾಗಿ ಆಡಿದ್ದಾರೆ ಎಂದು ಹೇಳುವ ಮೂಲಕ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಪಾಕಿಸ್ತಾನದ ಕಾಲೆಳೆದಿದ್ದಾರೆ.
ನವದೆಹಲಿ: ಪಾಕ್ ನೆಲದಲ್ಲಿ ನಮ್ಮ ಹುಡುಗರು ಚೆನ್ನಾಗಿ ಆಡಿದ್ದಾರೆ ಎಂದು ಹೇಳುವ ಮೂಲಕ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಪಾಕಿಸ್ತಾನದ ಕಾಲೆಳೆದಿದ್ದಾರೆ.
ಬುಧವಾರ ರಾತ್ರಿ ನಡೆದ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭಾರತೀಯ ಸೇನೆ ನಡೆಸಿದ್ದ ಸೀಮಿತ ದಾಳಿ ಕಾರ್ಯಾಚರಣೆಯನ್ನು ಟ್ವಿಟರ್ ನಲ್ಲಿ ಶ್ಲಾಘಿಸಿರುವ ಸೆಹ್ವಾಗ್, ಭಾರತೀಯ ಸೇನೆಗೆ ಸೆಲ್ಯೂಟ್ ಎಂದು ಹೇಳಿದ್ದಾರೆ. ಅಂತೆಯೇ ನಮ್ಮ ಹುಡುಗರು ತುಂಬಾ ಚೆನ್ನಾಗಿ ಆಡಿದರು ಎಂದು ಹೇಳುವ ಮೂಲಕ ಪಾಕಿಸ್ತಾನವನ್ನು ಗೇಲಿ ಮಾಡಿದ್ದಾರೆ.
ಬುಧನವಾರ ರಾತ್ರಿ ಪಾಕ್ ಆಕ್ರಮಿತ ಕಾಶ್ಮೀರದಲ್ಲಿದ್ದ 7 ಉಗ್ರ ಕ್ಯಾಂಪ್ ಗಳ ಮೇಲೆ ದಾಳಿ ಮಾಡಿದ್ದ ಭಾರತೀಯ ಯೋಧರು 38 ಉಗ್ರರ ಸೆದೆಬಡಿದು, ಇದನ್ನು ತಡೆಯಲು ಬಂದ 6 ಪಾಕಿಸ್ತಾನಿ ಸೈನಿಕರನ್ನು ಕೊಂದು ಹಾಕಿದ್ದರು. ಸೇನೆಯ ಈ ಕಾರ್ಯಕ್ಕೆ ದೇಶಾದ್ಯಂತ ಮೆಚ್ಚುಗೆ ವ್ಯಕ್ತವಾಗಿತ್ತು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.