ಉಗ್ರರ ವಿರುದ್ಧ ಸೇನೆಯ ಸೀಮಿತ ದಾಳಿ: ಪ್ರಧಾನಿ ಮೋದಿಗೆ ಅಭಿನಂದನೆ ಸಲ್ಲಿಸಿದ ಕೇಜ್ರಿವಾಲ್
ಪಾಕಿಸ್ತಾನ ಆಕ್ರಮಿತ ಉಗ್ರರ ನೆಲೆಗಳ ಮೇಲೆ ಸೀಮಿತ ದಾಳಿ ಮಾಡುವ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಜತಾಂತ್ರಿಕ ನಿರ್ಧಾರವೊಂದನ್ನು ಕೈಗೊಂಡಿದ್ದಾರೆಂದು ದೆಹಲಿ ಮುಖ್ಯಮಂತ್ರಿ...
ನವದೆಹಲಿ: ಪಾಕಿಸ್ತಾನ ಆಕ್ರಮಿತ ಉಗ್ರರ ನೆಲೆಗಳ ಮೇಲೆ ಸೀಮಿತ ದಾಳಿ ಮಾಡುವ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಜತಾಂತ್ರಿಕ ನಿರ್ಧಾರವೊಂದನ್ನು ಕೈಗೊಂಡಿದ್ದಾರೆಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಶುಕ್ರವಾರ ಹೇಳಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಅವರು, ಉರಿ ಸೆಕ್ಟರ್ ದಾಳಿಯಲ್ಲಿ 18 ಭಾರತೀಯ ಯೋಧರು ಹುತಾತ್ಮರಾಗಿದ್ದರು. ಇದಕ್ಕೆ ಪ್ರತಿಕಾರವಾಗಿ ನಮ್ಮ ಯೋಧರು ಉಗ್ರರ ನೆಲೆಗಳ ಮೇಲೆ ಮೇಲೆ ಸೀಮಿತ ದಾಳಿಯನ್ನು ಮಾಡಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರ ರಾಜತಾಂತ್ರಿಕ ನಿರ್ಧಾರವೊಂದನ್ನು ಕೈಗೊಂಡಿದ್ದಾರೆ. ಕೇಂದ್ರ ಸರ್ಕಾರ ಮತ್ತು ಸೇನೆಗೆ ಬೆಂಬಲ ನೀಡುವುದು ದೇಶದಲ್ಲಿರುವ ಪ್ರತೀಯೊಬ್ಬ ನಾಗರೀಕ ಹಾಗೂ ಅಧಿಕಾರಿಗಳ ಪ್ರಮುಖ ಜವಾಬ್ದಾರಿಯಾಗಿರುತ್ತದೆ. ಕೇಂದ್ರ ಸರ್ಕಾರ, ಮೋದಿ ಹಾಗೂ ಭಾರತೀಯ ಸೇನೆಗೆ ಅಭಿನಂದನೆಗಳನ್ನು ಸಲ್ಲಿಸಲು ಇಚ್ಛಿಸುತ್ತೇನೆಂದು ಹೇಳಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.