ನವದೆಹಲಿ: ಲಂಡನ್ ನಿಂದ ದೆಹಲಿಗೆ ಆಗಮಿಸುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಗಗನಸಖಿಗೆ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಪಟ್ಟಂತೆ ಭಾರತೀಯ ಮೂಲದ ಇಬ್ಬರು ಬ್ರಿಟನ್ ಪ್ರಜೆಗಳನ್ನು ಬಂಧಿಸಲಾಗಿದೆ. ಅವರು ಮದ್ಯದ ನಶೆಯಲ್ಲಿದ್ದರು ಎಂದು ಹೇಳಲಾಗಿದೆ.
ದೂರು ದಾಖಲಾದ ನಂತರ ಇಬ್ಬರನ್ನು ಬಂಧಿಸಿ ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು. ಇವರಿಬ್ಬರು ರಿಯಲ್ ಎಸ್ಟೇಟ್ ಏಜೆಂಟರಾಗಿದ್ದಾರೆ.
ಘಟನೆಯನ್ನು ತೀವ್ರವಾಗಿ ಖಂಡಿಸಿರುವ ಏರ್ ಇಂಡಿಯಾ ತನಿಖೆ ನಡೆಸುವುದಾಗಿ ಹೇಳಿದೆ.
ಆರೋಪಿಗಳನ್ನು ಜಸ್ಪಾಲ್ ಸಿಂಗ್ ಮತ್ತು ಚರಂದೀಪ್ ಖೈರಾ ಎಂದು ಗುರುತಿಸಲಾಗಿದ್ದು ಅವರು ಲಂಡನ್ ನಿಂದ ಜೈಪುರದಲ್ಲಿ ಮದುವೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಆಗಮಿಸಿದ್ದರು.
ಅವರನ್ನು ಪರೀಕ್ಷೆಗೊಳಪಡಿಸಿದಾಗ ಮದ್ಯ ಸೇವಿಸಿರುವುದು ದೃಢಪಟ್ಟಿತ್ತು.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos