ಸಾಂದರ್ಭಿಕ ಚಿತ್ರ 
ದೇಶ

ಫೇಸ್'ಬುಕ್'ನಲ್ಲಿ 'ಕೋಮು ಪ್ರಚೋದಕ' ಪೋಸ್ಟ್: ವ್ಯಕ್ತಿ ಬಂಧನ

ಸಾಮಾಜಿಕ ಜಾಲತಾಣ ಫೇಸ್'ಬುಕ್ ನಲ್ಲಿ ಕೋಮು ಪ್ರಚೋದಕ ಪೋಸ್ಟ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನನ್ನು ಉತ್ತರಪ್ರದೇಶದ ರಾಜ್ಯದ ಮುಜಾಫರ್ನಗರ ಜಿಲ್ಲೆಯ ಪೊಲೀಸರು ಮಂಗಳವಾರ ಬಂಧನಕ್ಕೊಳಪಡಿಸಿದ್ದಾರೆ...

ಮುಜಾಫರ್ನಗರ: ಸಾಮಾಜಿಕ ಜಾಲತಾಣ ಫೇಸ್'ಬುಕ್ ನಲ್ಲಿ ಕೋಮು ಪ್ರಚೋದಕ ಪೋಸ್ಟ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನನ್ನು ಉತ್ತರಪ್ರದೇಶದ ರಾಜ್ಯದ ಮುಜಾಫರ್ನಗರ ಜಿಲ್ಲೆಯ ಪೊಲೀಸರು ಮಂಗಳವಾರ ಬಂಧನಕ್ಕೊಳಪಡಿಸಿದ್ದಾರೆ. 
ಪ್ರತ್ಯೇಕ ಸಮುದಾಯವೊಂದಕ್ಕೆ ಸಂಬಂಧಿಸಿದಂತೆ ಸುಜ್ರು ಗ್ರಾಮದ 20 ವರ್ಷದ ವ್ಯಕ್ತಿಯೊಬ್ಬರು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಪೋಸ್ಟ್ ವೊಂದನ್ನು ಹಾಕಿದ್ದರು. ಇದಕ್ಕೆ ಸಾಕಷ್ಟು ವಿರೋಧಗಳು ಹಾಗೂ ಟೀಕೆಗಳು ವ್ಯಕ್ತವಾಗಿದ್ದವು.  
ವ್ಯಕ್ತಿ ಹಾಕಿದ್ದ ಪೋಸ್ಟ್ ಗೆ ವಿರೋಧ ವ್ಯಕ್ತಪಡಿಸಿದ್ದ ಸಮುದಾಯದ ನಾಯಕರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ವ್ಯಕ್ತಿಯ ಪೋಸ್ಟ್ ಕೋಮುಘರ್ಷಣೆಗೆ ಪ್ರಚೋದನೆ ನೀಡುವಂತಿದೆ ಎಂದು ಹೇಳಿದ್ದರು. ಈ ಹಿನ್ನಲೆಯಲ್ಲಿ ದೂರನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ವ್ಯಕ್ತಿಯನ್ನು ಬಂಧನಕ್ಕೊಳಪಡಿಸಿ ತನಿಖೆ ನಡೆಸುತ್ತಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಬಿಕಿನಿ ಧರಿಸಿರುವ ಮಹಿಳೆಯರ ಜೊತೆಗೆ ಸ್ಟೀಫನ್ ಹಾಕಿಂಗ್! Epstein ಫೈಲ್ಸ್ ನಲ್ಲಿ ಪೋಟೋ ಬಿಡುಗಡೆ

'The Kerala Story 2: Goes Beyond' ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

SCROLL FOR NEXT