ಸಂಗ್ರಹ ಚಿತ್ರ 
ದೇಶ

ಪೊಲೀಸ್ ಅಧಿಕಾರಿಯ ಅಪ್ರಾಪ್ತ ಪುತ್ರಿ ಮೇಲೆ ಬಾಕ್ಸರ್ ನಿಂದ ಅತ್ಯಾಚಾರ!

ಪೊಲೀಸ್ ಅಧಿಕಾರಿಯ ಅಪ್ರಾಪ್ತ ಪುತ್ರಿಯನ್ನೇ ಅಪಹರಿಸಿ ಅತ್ಯಾಚಾರ ಗೈದಿರುವ ಆತಂಕಕಾರಿ ಘಟನೆ ಮಧ್ಯ ಪ್ರದೇಶದ ಭೋಪಾಲ್ ನಲ್ಲಿ ನಡೆದಿದೆ.

ಭೋಪಾಲ್: ಪೊಲೀಸ್ ಅಧಿಕಾರಿಯ ಅಪ್ರಾಪ್ತ ಪುತ್ರಿಯನ್ನೇ ಅಪಹರಿಸಿ ಅತ್ಯಾಚಾರ ಗೈದಿರುವ ಆತಂಕಕಾರಿ ಘಟನೆ ಮಧ್ಯ ಪ್ರದೇಶದ ಭೋಪಾಲ್ ನಲ್ಲಿ ನಡೆದಿದೆ.

ಮೂಲಗಳ ಪ್ರಕಾರ ಮಧ್ಯ ಪ್ರದೇಶದಲ್ಲಿ ಪೊಲೀಸ್ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ವ್ಯಕ್ತಿ 14 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಬಾಕ್ಸಿಂಗ್ ಪಟುವೋರ್ವ ಅತ್ಯಾಚಾರ ಮಾಡಿದ್ದಾನೆ ಎಂದು ತಿಳಿದುಬಂದಿದೆ. ಪ್ರಾಥಮಿಕ  ತನಿಖೆಗಳ ಪ್ರಕಾರ ಆರೋಪಿ ಬಾಕ್ಸಿಂಗ್ ಪಟು ಹಾಗೂ ಬಾಲಕಿ ಇಬ್ಬರೂ ಫೇಸ್ ಬುಕ್ ನಲ್ಲಿ ಪರಿಚಿತರಾಗಿದ್ದು, ಇದನ್ನೇ ತನ್ನ ದುಷ್ಕೃತ್ಯಕ್ಕೆ ಬಳಸಿಕೊಂಡ ಬಾಕ್ಸರ್ ಬಾಲಕಿಯನ್ನು ಪುಸಲಾಯಿಸಿ ಕರೆಸಿಕೊಂಡು ನಿರ್ಜನ ಪ್ರದೇಶಕ್ಕೆ  ಕರೆದೊಯ್ದು ಅತ್ಯಾಚಾರವೆಸಗಿದ್ದಾನೆ.

ಈ ಸುದ್ದಿ ಇದೀಗ ಮಧ್ಯ ಪ್ರದೇಶದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದ್ದು, ಮಾಧ್ಯಮ ವರದಿಗಳ ಬಳಿಕ ಎಚ್ಚೆತ್ತ ಮಧ್ಯ ಪ್ರದೇಶ ಸರ್ಕಾರ ತನಿಖೆಗೆ ಆದೇಶಿಸಿದ್ದು, ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.   ಬಾಲಕಿ ನೀಡಿದ ಮಾಹಿತಿ ಮೇರೆ ಆರೋಪಿ ಬಾಕ್ಸರ್ ನನ್ನು ಬಂಧಿಸಲಾಗಿದ್ದು, ಇಬ್ಬರನ್ನೂ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ.

ಸಾರ್ವಜನಿಕರಿಗೆ ರಕ್ಷಣೆ ನೀಡುವ ಪೊಲೀಸ್ ಅಧಿಕಾರಿಯ ಪುತ್ರಿಗೆ ಈ ಗತಿಯಾದರೆ ಸಾಮಾನ್ಯ ಜನರ ಪಾಡೇನು ಎಂದು ಜನರು ಪ್ರಶ್ನಿಸುವಂತಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

CM ಡಿ.ಕೆ. ಶಿವಕುಮಾರ್‌ಗಾಗಿ IndiGo flight ಲೇಟ್? VVIP ಸಂಸ್ಕೃತಿ ವಿರುದ್ಧ ಪ್ರಯಾಣಿಕರ ಆಕ್ರೋಶ..!

ಬರಗಾಲದ ಬೆನ್ನಲ್ಲೇ ಬೆಲೆ ಏರಿಕೆ ಬರೆ: ಮಧ್ಯಮ ವರ್ಗದವರಿಗೆ ಆರ್ಥಿಕ ಹೊಡೆತ, ಅಕ್ಕಿ ದರ ಗಗನಕ್ಕೆ..!

ಬರ ಎಫೆಕ್ಟ್: ರೈತರ ನೆರವಿಗೆ ಧಾವಿಸಿದ ಸರ್ಕಾರ; 1,250 ಕೋಟಿ ರೂ. ಮೊದಲ ಕಂತು ಬಿಡುಗಡೆ..!