ದೇಶ

2000 ರೂ ನೋಟುಗಳ ರದ್ದತಿ ಯೋಜನೆ ಇಲ್ಲ: ಸರ್ಕಾರದ ಸ್ಪಷ್ಟನೆ

Srinivas Rao BV
ನವದೆಹಲಿ: 2000 ರೂಪಾಯಿ ಮುಖಬೆಲೆಯ ನೋಟುಗಳನ್ನು ರದ್ದುಗೊಳಿಸುವ ಯೋಜನೆ ಸದ್ಯಕ್ಕೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ. 
ರಾಜ್ಯಸಭೆಯಲ್ಲಿ ಈ ಬಗ್ಗೆ ಸ್ಪಷ್ಟನೆ ನೀಡಿರುವ ಕೇಂದ್ರ ಸಚಿವ ಕಿರಣ್ ರಿಜಿಜು, 2000 ರೂಪಾಯಿ ಮುಖಬೆಲೆಯ ನಕಲಿ ನೋಟುಗಳನ್ನು ಜಪ್ತಿ ಮಾಡುತ್ತಿದ್ದೇವೆ. ಪಶ್ಚಿಮ ಬಂಗಾಳ, ಗುಜರಾತ್ ನಲ್ಲಿ ಈ ರೀತಿಯ ಹೆಚ್ಚಿನ ಪ್ರಕರಣಗಳು ವರದಿಯಾಗಿದೆ. ಆದರೆ ನಕಲಿ ನೋಟುಗಳನ್ನು ಗುರುತು ಹಿಡಿಯಲು ಸಾಧ್ಯವಾಗುತ್ತಿಲ್ಲ ಎಂದಲ್ಲ. ನೋಟು ನಿಷೇಧದ ನಂತರ ಬೆಳಕಿಗೆ ಬಂದಿರುವ ನಕಲಿ ನೋಟುಗಳು ಕಳಪೆ ಗುಣಮಟ್ಟದ ಕಾಗದದಿಂದ ತಯಾರು ಮಾಡಲಾಗಿತ್ತು. ನಂತರದ ದಿನಗಳಲ್ಲಿ ಅತ್ಯುತ್ತಮ ಗುಣಮಟ್ಟದ ನಕಲಿ ನೋಟುಗಳನ್ನು ಚಲಾವಣೆ ಮಾಡಲಾಗುತ್ತಿದೆ ಎಂದು ಕಿರಣ್ ರಿಜಿಜು ಮಾಹಿತಿ ನೀಡಿದ್ದಾರೆ. 
2000 ರೂ ನೋಟುಗಳ ರದ್ದತಿ ಬಗ್ಗೆ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸಂಸದ ಮಧುಸೂದನ್ ಮಿಸ್ತ್ರಿ ಕೇಳಿದ ಪ್ರಶ್ನೆಗೆ ಉತ್ತರಿಸಿರುವ ಕಿರಣ್ ರಿಜಿಜು 2000 ರೂ ಮುಖಬೆಲೆಯ ನೋಟುಗಳನ್ನು ರದ್ದು ಮಾಡುವ ಯೋಜನೆ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. 
SCROLL FOR NEXT