ನವದೆಹಲಿ: ಮುಂಬೈ ಮತ್ತು ಪುಣೆಯಲ್ಲಿ ಶಿವಸೇನೆ ಸಂಸದ ರವೀಂದ್ರ ಗಾಯಕ್ವಾಡ್ ಗೆ ನಿಷೇಧ ಹೇರಿರುವ ಏರ್ ಇಂಡಿಯಾ ಹಾರಾಟವನ್ನು ಸ್ಥಗಿತಗೊಳಿಸುವುದಾಗಿ ಶಿವಸೇನೆ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಈ ಎರಡು ವಿಮಾನ ನಿಲ್ದಾಣಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.
ಇನ್ನು ಶಿವಸೇನೆ ಬೆದರಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ಏರ್ ಇಂಡಿಯಾ ಸಹ ಮುಂಬೈ ಮತ್ತು ದೆಹಲಿಯ ವಿಮಾನ ನಿಲ್ದಾಣದಲ್ಲಿ ಕಾರ್ಯನಿರ್ವಹಿಸುವ ತನ್ನ ಸಿಬ್ಬಂದಿಗೆ ಭದ್ರತೆ ಒದಗಿಸುವುದಾಗಿ ಏರ್ ಇಂಡಿಯಾ ಮೂಲಗಳು ತಿಳಿಸಿವೆ.
ರವೀಂದ್ರ ಗಾಯಕ್ವಾಡ್ ಅವರ ಮೇಲಿನ ನಿಷೇಧ ಹಿಂಪಡೆಯಲು ಕೇಂದ್ರ ವಿಮಾನಯಾನ ಸಚಿವ ಅಶೋಕ್ ಗಜಪತಿ ರಾಜು ಅವರು ನಿರಾಕರಿಸಿದ್ದರಿಂದ ಆಕ್ರೋಶಗೊಂಡ ಶಿವಸೇನೆ ಸಂಸದರು ಮುಂಬೈ ಮತ್ತು ಪುಣೆ ವಿಮಾನ ನಿಲ್ದಾಣಗಳಲ್ಲಿ ಏರ್ ಇಂಡಿಯಾ ವಿಮಾನ ಹಾರಾಟವನ್ನು ಸ್ಥಗಿತಗೊಳಿಸುವುದಾಗಿ ಬೆದರಿಕೆ ಹಾಕಿದ್ದರು.