ಅಮಿತ್ ಶಾ 
ದೇಶ

2019 ರಲ್ಲಿ ಉತ್ತಮ ಪ್ರದರ್ಶನಕ್ಕಾಗಿ ವೇದಿಕೆ ಸಿದ್ಧಪಡಿಸಿ: ಬಿಜೆಪಿ ಪಡೆಗೆ ಅಮಿತ್ ಶಾ ಸೂಚನೆ

2019 ರ ಲೋಕಸಭಾ ಚುನಾವಣೆಗೆ ಈಗಿನಿಂದಲೇ ತಯಾರಿ ನಡೆಸುವಂತೆ ಬಿಜೆಪಿ ಪಡೆಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಕರೆ ನೀಡಿದ್ದು, ಕಳೆದ ಲೋಕಸಭಾ ಚುನಾವಣೆಯಷ್ಟೇ ಫಲಿತಾಂಶದಿಂದ ತೃಪ್ತರಾಗದಂತೆ ಎಚ್ಚರಿಸಿದ್ದಾರೆ.

ನವದೆಹಲಿ: 2019 ರ ಲೋಕಸಭಾ ಚುನಾವಣೆಗೆ ಈಗಿನಿಂದಲೇ ತಯಾರಿ ನಡೆಸುವಂತೆ ಬಿಜೆಪಿ ಪಡೆಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಕರೆ ನೀಡಿದ್ದು, ಕಳೆದ ಲೋಕಸಭಾ ಚುನಾವಣೆಯಷ್ಟೇ ಫಲಿತಾಂಶದಿಂದ ತೃಪ್ತರಾಗದಂತೆ ಎಚ್ಚರಿಸಿದ್ದಾರೆ. 
ಏ.6 ರಂದು ಪಕ್ಷದ ಸಂಸ್ಥಾಪನಾ ದಿನದ ಅಂಗವಾಗಿ ನವದೆಹಲಿಯಲ್ಲಿ ಪಕ್ಷದ ಸಂಸದೀಯ ಮಂಡಳಿ ಸಭೆಯನ್ನುದ್ದೇಶಿಸಿ ಮಾತನಾಡಿರುವ ಅಮಿತ್ ಶಾ, ಪಕ್ಷವನ್ನು ರಾಜ್ಯಗಳಲ್ಲಿ ಹೆಚ್ಚು ಬಲಪಡಿಸುವಂತೆ ಸಂಸದರಿಗೆ ಸೂಚನೆ ನೀಡಿದ್ದಾರೆ. ಪಕ್ಷವನ್ನು ಸಂಘಟಿಸುವುದರೊಂದಿಗೆ ಕಳೆದ 3 ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸಾಧನೆಗಳನ್ನು ಜನರಿಗೆ ತಲುಪಿಸುವ ಜವಾಬ್ದಾರಿಯನ್ನೂ ಅಮಿತ್ ಶಾ ಸಂಸದರ ಹೆಗಲಿಗೇರಿಸಿದ್ದಾರೆ. 
2019 ರ ಲೋಕಸಭಾ ಚುನಾವಣೆಯನ್ನು ಗುರಿಯಾಗಿರಿಸಿಕೊಂಡು ಅಮಿತ್ ಶಾ ಬಿಜೆಪಿ ಸಂಸದರಿಗೆ ಒಂದಷ್ಟು ಯೋಜನೆಗಳನ್ನು ನೀಡಿದ್ದಾರೆ. ಇದೇ ವೇಳೆ ಕೇಂದ್ರ ಸಚಿವರಿಗೂ ಸಹ ಚುನಾವಣೆಗೆ ತಯಾರಾಗುವಂತೆ ಸೂಚನೆ ನೀಡಲಾಗಿದ್ದು ಯಾವ್ಯಾವ ಸಚಿವರು ಎಲ್ಲೆಲ್ಲಿಗೆ ಹೋಗಿ ಪ್ರಚಾರ ಮಾಡಬೇಕೆಂಬ ಪಟ್ಟಿಯೂ ಈಗಾಗಲೇ ಸಿದ್ಧಗೊಂಡಿದ್ದು, 2019 ರ ಚುನಾವಣೆಗೆ ಬಿಜೆಪಿ ಈಗಿನಿಂದಲೇ ಕಾರ್ಯತಂತ್ರ ರೂಪಿಸುತ್ತಿರುವುದು ಸ್ಪಷ್ಟವಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಕೊನೆಯ ಓವರ್‌ನಲ್ಲಿ ಭಾರತಕ್ಕೆ ವಿಂಡೀಸ್ ವಿರುದ್ಧ ರೋಚಕ ಜಯ: T20 ಸರಣಿಯಲ್ಲಿ 2-1 ಮುನ್ನಡೆ!

'We're Sorry': ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...: ವಿಡಿಯೋ ವೈರಲ್!

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್