ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಭಾರತಕ್ಕೆ ಆಗಮಿಸಿದ ಬಾಂಗ್ಲಾ ಪ್ರಧಾನಿ: ಶಿಷ್ಟಾಚಾರ ಬದಿಗೊತ್ತಿ ಶೇಖ್ ಹಸೀನಾರನ್ನು ಸ್ವಾಗತಿಸಿದ ಪ್ರಧಾನಿ ಮೋದಿ

4 ದಿನಗಳ ಪ್ರವಾಸಕ್ಕಾಗಿ ಶುಕ್ರವಾರ ನವದೆಹಲಿಗೆ ಆಗಮಿಸಿದ ಬಾಂಗ್ಲಾದೇಶದ ಪ್ರಧಾನಮಂತ್ರಿ ಶೇಖ್ ಹಸೀನಾ ಅವರನ್ನು ಶಿಷ್ಟಾಚಾರಗಳನ್ನು ಬದಿಗೊತ್ತಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು...

ಭಾರತಕ್ಕೆ ಆಗಮಿಸಿದ ಬಾಂಗ್ಲಾ ಪ್ರಧಾನಿ
Manjula VN
Updated On : 7 Apr 2017, 2:32 am
ನವದೆಹಲಿ:  4 ದಿನಗಳ ಪ್ರವಾಸಕ್ಕಾಗಿ ಶುಕ್ರವಾರ ನವದೆಹಲಿಗೆ ಆಗಮಿಸಿದ ಬಾಂಗ್ಲಾದೇಶದ ಪ್ರಧಾನಮಂತ್ರಿ ಶೇಖ್ ಹಸೀನಾ ಅವರನ್ನು ಶಿಷ್ಟಾಚಾರಗಳನ್ನು ಬದಿಗೊತ್ತಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ವಿಮಾನ ನಿಲ್ದಾಣದಲ್ಲೇ ಸ್ವಾಗತಿಸಿದ್ದಾರೆ. 
ಶೇಖ್ ಹಸೀನಾ ಅವರು ಇಂದಿರಾಗಾಂಧಿ ವಿಮಾನ ನಿಲ್ದಾಣಕ್ಕೆ ಇಂದು ಮಧ್ಯಾಹ್ನ ಆಗಮಿಸಿದರು. ವಿಮಾನ ನಿಲ್ದಾಣಕ್ಕೆ ತೆರಳಿದ ಪ್ರಧಾನಿ ಮೋದಿಯವರು ಶೇಖ್ ಹಸೀನಾ ಅವರಿಗೆ ಹೂಗುಚ್ಛ ನೀಡುವ ಮೂಲಕ ಸ್ವಾಗತಿಸಿದರು. 
ದೆಹಲಿಯ ಲೋಕ್ ಕಲ್ಯಾಣ್ ಮಾರ್ಗ್ ನಲ್ಲಿನ ತಮ್ಮ ನಿವಾಸದಿಂದ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಧಾನಿ ಮೋದಿಯವರು ಆಗಮಿಸಿದ್ದರು. ಪ್ರಯಾಣದ ವೇಳೆ ರಸ್ತೆಗಳಲ್ಲಿ ಯಾವುದೇ ನಿರ್ಬಂಧಗಳನ್ನು ಹೇರದೇ ಸಾಮಾನ್ಯರಂತೆ ತೆರಳಿದರು ಎಂದು ಅಧಿಕಾರಿಗಳ ಮೂಲಗಳು ತಿಳಿಸಿವೆ. 

Advertisement

Advertisement

ಏಳು ವರ್ಷದ ನಂತರ ಬಾಂಗ್ಲಾದೇಶದ ಪ್ರಧಾನಿಯೊಬ್ಬರು ಭಾರತಕ್ಕೆ ಆಗಮಿಸುತ್ತಿದ್ದಾರೆ. 4 ದಿನಗಳ ಕಾಲ ಭಾರತದಲ್ಲಿರುವ ಶೇಖ್ ಹಸೀನಾ ಅವರು ಪ್ರಧಾನಿ ಮೋದಿಯವರೊಂದಿಗೆ ಹಲವಾರು ವಿಷಯಗಳ ಕುರಿತು ಚರ್ಚೆ ನಡೆಸಲಿದ್ದಾರೆ. ಅಲ್ಲದೆ, ಭಾರತ ಬಾಂಗ್ಲಾದೇಶಕ್ಕೆ 500 ಮಿಲಿಯನ್ ಡಾಲರ್ ನೆರವು ಘೋಷಣೆ ಮಾಡುವ ಸಾಧ್ಯತೆಯೂ ಇದೆ. ಹಸೀನಾ ಅವರ ಪ್ರವಾಸದ ವೇಳೆ 20ಕ್ಕೂ ಹೆಚ್ಚು ಒಪ್ಪಂದಗಳಿಗೆ ಸಹಿ ಬೀಳುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement