ಜಾರ್ಖಂಡ್: 2 ಪೊಲೀಸರನ್ನು ಹತ್ಯೆ ಮಾಡಿದ ಮಾವೊವಾದಿಗಳು
ಜಾರ್ಖಂಡ್ ನ ಸಿಮ್ದೇಗಾ ಜಿಲ್ಲೆಯಲ್ಲಿ ಮಾವೊವಾದಿಗಳು ಹಾಗೂ ಪೊಲೀಸರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಇಬ್ಬರು ಪೊಲೀಸರು ಹುತಾತ್ಮರಾಗಿದ್ದಾರೆ.
ರಾಂಚಿ: ಜಾರ್ಖಂಡ್ ನ ಸಿಮ್ದೇಗಾ ಜಿಲ್ಲೆಯಲ್ಲಿ ಮಾವೊವಾದಿಗಳು ಹಾಗೂ ಪೊಲೀಸರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಇಬ್ಬರು ಪೊಲೀಸರು ಹುತಾತ್ಮರಾಗಿದ್ದಾರೆ.
ಪೊಲೀಸ್ ಅಧಿಕಾರಿಗಳ ಮಾಹಿತಿ ಪ್ರಕಾರ ಬನೊ ಪೊಲೀಸ್ ಠಾಣೆಯ ಉಸ್ತುವಾರಿ ವಿದ್ಯಾಪತಿ ಸಿಂಗ್ ಹಾಗೂ ಪೇದೆ ತರುಣ್ ಬುರಾಲಿ ಇಬ್ಬರೂ ಹುತಾತ್ಮರಾಗಿದ್ದಾರೆ. ಗಸ್ತು ತಿರುಗುತ್ತಿದ್ದ ವೇಳೆಯಲ್ಲಿ ಪೊಲೀಸ್ ಅಧಿಕಾರಿಗಳ ಮೇಲೆ ಮಾವೊವಾದಿಗಳು ದಾಳಿ ನಡೆಸಿದ್ದಾರೆ, ಈ ವೇಳೆ ಪೊಲೀಸರು ಹಾಗೂ ಮಾವೊವಾದಿಗಳ ನಡುವೆ ಗುಂಡಿನ ಚಕಮಕಿ ನಡೆದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.