ಪಶ್ಚಿಮ ಬಂಗಾಳ 
ದೇಶ

ಪಶ್ಚಿಮ ಬಂಗಾಳ: ರಾಮನವಮಿ ಆಯ್ತು ಈಗ ಹನುಮ ಜಯಂತಿ ಮೆರವಣಿಗೆಯಲ್ಲಿ ಪೊಲೀಸ್ ಲಾಠಿ ಚಾರ್ಜ್

ಪಶ್ಚಿಮ ಬಂಗಾಳದ ಬಿರ್ಭಮ್ ನಲ್ಲಿ ಹನುಮ ಜಯಂತಿ ಆಚರಣೆ ವೇಳೆ ಲಾಠಿ ಚಾರ್ಜ್ ನಡೆದಿದೆ.

ಕೋಲ್ಕತಾ: ಪಶ್ಚಿಮ ಬಂಗಾಳದ ಬಿರ್ಭಮ್ ನಲ್ಲಿ ಹನುಮ ಜಯಂತಿ ಆಚರಣೆ ವೇಳೆ ಲಾಠಿ ಚಾರ್ಜ್ ನಡೆದಿದೆ. 
ರಾಮನವಮಿ ಆಚರಣೆಯ ಸಂದರ್ಭದಲ್ಲಿಯೂ ಪಶ್ಚಿಮ ಬಂಗಾಳದಲ್ಲಿ ಇಂಥಹದ್ದೇ ಅಹಿತಕರ ಘಟನೆ ನಡೆದಿತ್ತು. ಈಗ ಸಂಬಂಧಿಸಿದ ಅಧಿಕಾರಿಗಳಿಂದ ಪೂರ್ವಾನುಮತಿ ಪಡೆಯದೇ ಹನುಮ ಜಯಂತಿ ಆಚರಣೆ ನಡೆಸಲಾಗಿದೆ ಎಂಬ ಕಾರಣಕ್ಕೆ ಬಿರ್ಭಮ್ ನಲ್ಲಿ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. 
ಹನುಮ ಜಯಂತಿ ಅಂಗವಾಗಿ ಕೇಸರಿ ಧ್ವಜ ಹಿಡಿದು ಮೆರವಣಿಗೆಯಲ್ಲಿ ಭಾಗವಹಿಸಿದ್ದ ಯುವಕರ ಮೇಲೆ ಪೊಲೀಸರು ಲಾಠಿ ಪ್ರಹಾರ ಮಾಡಿರುವುದು ದೃಶ್ಯಾವಳಿಗಳಲ್ಲಿ ದಾಖಲಾಗಿದೆ. ಆದರೆ ಮೆರವಣಿಗೆ ನಡೆಸುತ್ತಿದ್ದ ಸಂಘಟನೆ ಪೂರ್ವಾನುಮತಿ ಪಡೆಯದೇ ಇರುವುದನ್ನು ನಿರಾಕರಿಸಿದೆ. " ಹನುಮ ಜಯಂತಿ ಅಂಗವಾಗಿ ಮೆರವಣಿಗೆ ನಡೆಸುವುದಕ್ಕೆ ಜಿಲ್ಲಾಡಳಿತ ಹಾಗೂ ಪೊಲೀಸ್ ಅಧಿಕಾರಿಗಳನ್ನು ಸಂಪರ್ಕಿಸಿದ್ದೆವು. ಆದರೆ ಅನುಮತಿ ನೀಡುವುದಕ್ಕೆ ಅಧಿಕಾರಿಗಳು ನಿರಾಕರಿಸಿದರು ಎಂದು ಪ್ರತ್ಯಾರೋಪ ಮಾಡಿದ್ದಾರೆ. 
ಕಳೆದ ವಾರ ರಾಮನವಮಿ ಆಚರಣೆಗೆ ಅಡ್ಡಿ ಉಂಟಾದಾಗ ಮಧ್ಯಪ್ರವೇಶಿಸಿದ್ದ ಕೋಲ್ಕತ್ತಾ ಹೈಕೋರ್ಟ್ ಸ್ಥಳೀಯರು ರಾಮನವಮಿ ಆಚರಣೆ ಮಾಡುವುದಕ್ಕೆ ಅನುಮತಿ ನೀಡುವಂತೆ ಸೂಚಿಸಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಯೋತ್ಪಾದಕ ದಾಳಿ ವಿಫಲಗೊಳಿಸಿದ ಭಾರತೀಯ ಪೈಲಟ್‌ಗೆ Israel ಅತ್ಯುನ್ನತ ಗೌರವ: ಸ್ವಾತಂತ್ರ್ಯ ದಿನಾಚರಣೆಗೆ ಪ್ರಧಾನಿ ಮೋದಿ, ಕ್ಯಾಪ್ಟನ್ ಸ್ಮಿತ್‌ಗೆ ಆಹ್ವಾನ..!

4 IAS ಅಧಿಕಾರಿಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ; ಯಾರಿಗೆಲ್ಲಾ ಬದಲಾವಣೆ

ಅಳಿವಿನಂಚಿನ ‘ಗೋಡಾವಣ’ಕ್ಕೆ ಮರುಜೀವ: ಜೈಸಲ್ಮೇರ್‌ನಲ್ಲಿ 2 Great Indian Bustards ಪಕ್ಷಿಗಳ ಬಿಡುಗಡೆ-Video

ಆಧಾರ ರಹಿತ ಆರೋಪ ಸರಿಯಲ್ಲ, ‘ದಾಖಲೆ ತೋರಿಸಿ, ಜಮೀನನ್ನೇ ನಿಮ್ಮ ಕುಟುಂಬಕ್ಕೆ ಕೊಡ್ತೀನಿ; HDK NICE ಆರೋಪಕ್ಕೆ ಸಚಿವ ಬಾಲಕೃಷ್ಣ ತಿರುಗೇಟು

SIR ಅಕ್ರಮಗಳ ಕುರಿತು ರಾಜ್ಯದಿಂದ ಪ್ರತ್ಯೇಕ ತನಿಖೆ ಇಲ್ಲ: CM ಡಿ.ಕೆ. ಶಿವಕುಮಾರ್ ಸ್ಪಷ್ಟನೆ